ನವದೆಹಲಿ: ಪಂಜಾಬ್‌ನ ಫಿರೋಜ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಘಟನೆ ಕುರಿತು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಒಪ್ಪಿಗೆ ನೀಡಿದೆ.
ಇದರಲ್ಲಿ ಚಂಡೀಗಢದ ಡಿಜಿಪಿ, ರಾಷ್ಟ್ರೀಯ ತನಿಖಾ ಸಂಸ್ಥೆಯ ಐಜಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮತ್ತು ಪಂಜಾಬ್‌ನ ಎಡಿಜಿಪಿ(ಭದ್ರತೆ) ಅವರನ್ನು ತನಿಖಾ ತಂಡದಲ್ಲಿ ಸೇರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.
ಇದಕ್ಕೂ ಮುನ್ನ ನಡೆದ ವಿಚಾರಣೆಯ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮಿಶ್ರಾ ಅವರು ಪ್ರಧಾನಿಗೆ ಭದ್ರತಾ ಲೋಪ ಉಂಟಾದ ಬಗ್ಗೆ ಸುಪ್ರೀಕೋರ್ಟ್ನಲ್ಲಿ ವಾದ ಮಂಡಿಸಿದ್ದರು. ಪಂಜಾಬ್ ಡಿಜಿ ಮತ್ತು ಮುಖ್ಯ ಕಾರ್ಯದರ್ಶಿಗೆ ಭದ್ರತಾ ಲೋಪದ ಬಗ್ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಕೇಂದ್ರದಿಂದ ತನಿಖೆಯನ್ನೂ ನಿಲ್ಲಿಸಲಾಗಿದೆ ಎಂದು ಕೋರ್ಟ್ಗೆ ತಿಳಿಸಿದ್ದರು.
ಇನ್ನು ಪಂಜಾಬ್ ಪರವಾಗಿ ಅಡ್ವೋಕೇಟ್ ಜನರಲ್, ಹಿರಿಯ ವಕೀಲ ಡಿ.ಎಸ್. ಪಟ್ವಾಲಿಯಾ ವಾದ ಮಂಡನೆ ಮಾಡಿದ್ದರು.
ಇದನ್ನೂ ಓದಿ: ಬಂಪರ್... ಇಂದೋರ್‌ನ ವಿದ್ಯಾರ್ಥಿಗೆ 49 ಲಕ್ಷ ವಾರ್ಷಿಕ ಪ್ಯಾಕೇಜ್ ನೀಡಿದ ಐಐಎಂ