ETV Bharat / bharat

ಜೂನ್​ 26ರಿಂದ 28ರ ವರೆಗೆ ಪ್ರಧಾನಿ ಮೋದಿ ಜರ್ಮನಿ-ಯುಎಇ ಪ್ರವಾಸ

ಜರ್ಮನಿ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಜಿ-7 ಶೃಂಗಸಭೆಯ ಎರಡು ಅಧಿವೇಶನಗಳಲ್ಲಿ ಮಾತನಾಡುವ ನಿರೀಕ್ಷೆಯಿದೆ.

PM to visit Germany, UAE from June 26-28
ಪ್ರಧಾನಿ ಮೋದಿ ಜರ್ಮನಿ-ಯುಎಇ ಪ್ರವಾಸ
author img

By

Published : Jun 22, 2022, 3:28 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳು ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 26 ಮತ್ತು 27ರಂದು ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ಅಲ್ಲಿ ನಡೆಯುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂನ್ 28ರಂದು ಯುಎಇಗೆ ಭೇಟಿ ನೀಡಲಿದ್ದಾರೆ.

ಜಿ-7 ಶೃಂಗಸಭೆಗಾಗಿ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಲ್ಲಿನ ಸ್ಕ್ಲೋಸ್ ಎಲ್ಮೌಗೆ ತೆರಳುತ್ತಿದ್ದಾರೆ. ಈ ಸಮಯದಲ್ಲಿ ಎರಡು ಅಧಿವೇಶನಗಳಲ್ಲಿ ಪ್ರಧಾನಿ ಮಾತನಾಡುವ ನಿರೀಕ್ಷೆಯಿದೆ. ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವ ವಿಷಯದ ಬಗ್ಗೆ ಭಾಷಣ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾದಂತಹ ಇತರ ಪ್ರಜಾಪ್ರಭುತ್ವ ರಾಷ್ಟ್ರಗಳನ್ನು ಜಿ-7 ಶೃಂಗಸಭೆಗೆ ಆಹ್ವಾನಿಸಲಾಗಿದೆ. ಇದರ ಹೊರತಾಗಿ ಪ್ರಧಾನಿ ಕೆಲವು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ಸಹ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಪ್ರಧಾನಿ ಕಚೇರಿ ಹೇಳಿದೆ.

ಜಿ-7 ಶೃಂಗಸಭೆವು ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಮತ್ತು ನಿಕಟ ಪಾಲುದಾರಿಕೆ ಮತ್ತು ಉನ್ನತ ಮಟ್ಟದ ರಾಜಕೀಯ ಸಂಪರ್ಕಗಳ ಸಂಪ್ರದಾಯಕ್ಕೆ ಅನುಗುಣವಾಗಿದೆ. ಭಾರತ-ಜರ್ಮನಿ ಅಂತರ್​ಸರ್ಕಾರಿ ಸಮಾಲೋಚನೆಗಳ (ಐಜಿಸಿ) ಆರನೇ ಆವೃತ್ತಿಗಾಗಿ ಮೇ 2ರಂದು ಪ್ರಧಾನಿ ಜರ್ಮನಿಗೆ ಭೇಟಿ ನೀಡಿದ್ದರು.

ಈ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಅವರು, ಜೂನ್ 28ರಂದು ಯುಎಇಗೆ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಪ್ರಧಾನಿ ವೈಯಕ್ತಿಕವಾಗಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಜೊತೆಗೆ ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ಮೋದಿ ಅಭಿನಂದಿಸಲಿದ್ದಾರೆ. ಅದೇ ದಿನ ರಾತ್ರಿ ಪ್ರಧಾನಿ ಯುಎಇಯಿಂದ ಭಾರತಕ್ಕೆ ಹಿಂದಿರುಗಲಿದ್ದಾರೆ.

ಇದನ್ನೂ ಓದಿ: ದೇವಸ್ಥಾನದ ನೆಲ ಗುಡಿಸಿ, ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.