ETV Bharat / bharat

ಪ್ರಧಾನಿ ಮೋದಿಯವರ ಜನಸ್ನೇಹಿ ನೀತಿಗಳೇ ಬೆಳಗಾವಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ: ಜೆ.ಪಿ.ನಡ್ಡಾ

Karnataka Urban local body elections: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

Nadda
Nadda
author img

By

Published : Sep 7, 2021, 3:50 PM IST

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP) ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಭೂತಪೂರ್ವ ವಿಜಯ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಈ ವಿಚಾರವಾಗಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(J.P.Nadda), ಪ್ರಧಾನಿ ನರೇಂದ್ರ ಮೋದಿಯವರ ಜನಸ್ನೇಹಿ ಯೋಜನೆಗಳೇ ಈ ಗೆಲುವಿಗೆ ಮುಖ್ಯ ಕಾರಣ ಎಂದಿದ್ದಾರೆ.

  • Thank you to the people of Karnataka for trusting the BJP in the three city corporation elections of Belagavi, Hubballi-Dharwad and Kalburgi. Congratulations to the @BSBommai Ji, @nalinkateel Ji and all the karyakartas, who have ensured that BJP won bigger than it did last time. pic.twitter.com/5H9WjJFj8g

    — Jagat Prakash Nadda (@JPNadda) September 7, 2021 " class="align-text-top noRightClick twitterSection" data=" ">

ಟ್ವೀಟ್ ಮೂಲಕ ಮತದಾರರಿಗೆ ಅಭಿನಂದನೆ ಸಲ್ಲಿಸಿರುವ ನಡ್ಡಾ, ಭಾರತೀಯ ಜನತಾ ಪಾರ್ಟಿಯ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ಧನ್ಯವಾದಗಳು. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿಯಲ್ಲಿ ನಮ್ಮ ಪಕ್ಷ ವಿಶೇಷ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ನಡ್ಡಾ ಅಭಿನಂದಿಸಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಅಭಿನಂದನೆ ತಿಳಿಸಿದ್ದಾರೆ. ರಾಜ್ಯ ನಾಯಕರ ಕಠಿಣ ಪರಿಶ್ರಮ ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯದ್ಭುತ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಗೆಲುವು ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸಿಹಿ.. ಎಂಇಎಸ್​ ಪಾಲಿಗೆ ಕುಂದಾ ಕಹಿ.. ಬೆಳಗಾವಿಯಲ್ಲಿ ಯಶಸ್ವಿಯಾದ ಕಮಲಪಾಳಯದ ತಂತ್ರ!

ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲೂ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದಿದೆ. ಕಲಬುರ್ಗಿಯಲ್ಲೂ ಹಿಂದೆ ನಡೆದ ಚುನಾವಣೆಗಿಂತಲೂ ಉತ್ತಮ ಸಾಧನೆ ತೋರಿದೆ. ಬೊಮ್ಮಾಯಿ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮದ ಫಲವಾಗಿ ಫಲಿತಾಂಶ ದೊರೆತಿದೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗು ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ ಕ್ರಮವಾಗಿ 35, 39 ಮತ್ತು 23 ಸ್ಥಾನಗಳನ್ನು ಗೆದ್ದು ಬೀಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.