ಅರಿಯಲೂರು(ತಮಿಳುನಾಡು): ಸಹಶಿಕ್ಷಕರ ಮೇಲೆ ಲೈಂಗಿಕ ಕಿರುಕುಳದ ಆರೋಪಗಳ ಜೊತೆಗೆ ತನ್ನ ಶಾಲೆಯ 10ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯನ್ನು ಪ್ರೀತಿಸಿದ ಶಿಕ್ಷಕಿಯ ಪ್ರೇಮ ಪುರಾಣ ಬೆಳಕಿಗೆ ಬಂದಿದೆ.
ಈ ವಿಷಯ ತಿಳಿದ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಅರಿಯಲೂರು ಠಾಣೆ ಪೊಲೀಸರು ಆರೋಪಿ ಶಿಕ್ಷಕಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಶಿಕ್ಷಕಿ ಬಾಲಕನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾರೆ.
ಆರೋಪಿಯನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದು ವಿಚಾರಣೆ ಮುಂದುವರೆಸಿದ್ದಾರೆ.