ತಿರುವನಂತಪುರಂ(ಕೇರಳ): ಇಬ್ಬರು ಬಾಲಕಿಯರಿಗೆ ಸಾರ್ವಜನಿಕವಾಗಿ 'ನಗ್ನತೆ ಪ್ರದರ್ಶಿಸಿದ ಆಪಾದನೆಯ'ದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಶ್ರೀಜಿತ್ ರವಿ ಖ್ಯಾತ ಹಿರಿಯ ನಟ ಟಿ.ಜಿ.ರವಿ ಅವರ ಪುತ್ರ. 2016ರಲ್ಲಿ ಇಬ್ಬರು ಬಾಲಕಿಯರೊಂದಿಗೆ ಈ ನಟ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ, ದೇಹವನ್ನು ನಗ್ನವಾಗಿಸಿ ಅವರ ಮುಂದೆ ಪ್ರದರ್ಶಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಶ್ರೀಜಿತ್ ರವಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಈ ರೀತಿಯ ಪ್ರಕರಣ ಇದೇ ಮೊದಲಲ್ಲ. ಮಲಯಾಳಂ ನಟ ವಿಜಯ್ ಬಾಬು ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿಯೂ ಈತನ ಹೆಸರು ಕೇಳಿಬಂದಿದೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ನಿರಾಕರಿಸಿತ್ತು. ಇದರ ವಿರುದ್ಧ ನೀಡುವಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇದನ್ನೂ ಓದಿ: ಶಾಸಕ ಜಮೀರ್ ಬಳಿ ₹87 ಕೋಟಿ ಮೌಲ್ಯದ ಅಕ್ರಮ ಆಸ್ತಿ: ಎಸಿಬಿ ದಾಳಿಯಲ್ಲಿ ಬಯಲು!