ರಾಮನಗರ(ಉತ್ತರಾಖಂಡ್): ಅಪ್ರಾಪ್ತೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರಾಖಂಡದ ರಾಮನಗರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಕಾಮುಕರು ಕೆಲವು ದಿನಗಳ ಹಿಂದೆ ಬಾಲಕಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕೊಂಡೊಯ್ದಿದ್ದರು. ಅಲ್ಲಿಂದ ಮನೆಗೆ ವಾಪಸ್ ಬಂದಿರುವ ಸಂತ್ರಸ್ತೆ ಪೋಷಕರ ಮುಂದೆ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಇದಾದ ಬಳಿಕ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
![ramnagar crime news](https://etvbharatimages.akamaized.net/etvbharat/prod-images/13207904_twdfdfd.jpg)
ಶಮ್ಸುಲ್ ಹಕ್, ಮೊಹಮ್ಮದ್ ಶರೀಫ್ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 363, 366 ಎ, 376 ಎ, 313, 323, 504 ಮತ್ತು 3/4 ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ರಾಮನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 15ರ ಬಾಲಕಿ ಮೇಲೆ ಗ್ಯಾಂಗ್ರೇಪ್, ಸಿಗರೇಟ್ನಿಂದ ಎದೆ ಸುಟ್ಟು, ಕೊಲೆ ; ಮರಕ್ಕೆ ಮೃತದೇಹ ನೇಣು
ಕಳೆದ ಕೆಲ ದಿನಗಳಿಂದ ದೇಶದ ವಿವಿಧೆಡೆ ಅಪ್ರಾಪ್ತೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ನಿನ್ನೆಯಷ್ಟೇ ಮಧ್ಯಪ್ರದೇಶದ ಸಿಧಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಕಾಮುಕರು, ಆಕೆಯ ಎದೆಯ ಭಾಗಕ್ಕೆ ಅಮಾನುಷವಾಗಿ ಸಿಗರೇಟ್ನಿಂದ ಸುಟ್ಟು, ತದನಂತರ ಕೊಲೆಗೈದಿದ್ದರು. ಅಷ್ಟೇ ಅಲ್ಲ, ಮೃತದೇಹವನ್ನು ಮರಕ್ಕೆ ನೇತು ಹಾಕಿ ಕ್ರೌರ್ಯ ಮೆರೆದಿದ್ದರು.