ETV Bharat / bharat

ಕಳ್ಳತನಕ್ಕೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್​​ ಕಾನ್ಸ್​​ಟೇಬಲ್​​

ರಾಜಸ್ಥಾನದ ದುಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಕಾನ್ಸ್‌ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಿತೇಂದ್ರ ಸಿಂಗ್ ಬಂಧಿತ ಆರೋಪಿ.

Constable Caught Red Handed
ಕಳ್ಳತನಕ್ಕೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್​​ ಕಾನ್ಸ್​​ಟೇಬಲ್​​
author img

By

Published : Aug 5, 2022, 6:56 AM IST

ದುಸಾ(ರಾಜಸ್ಥಾನ): ಕಳ್ಳತನಕ್ಕೆ ಯತ್ನಿಸುತ್ತಿದ್ದ ಪೊಲೀಸ್​ ಕಾನ್ಸ್​​ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ದುಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 15 ದಿನಗಳಿಂದ ನಗರದಲ್ಲಿ ನಿರಂತರ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದವು. ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದು, ಮಾಹಿತಿದಾರರ ಮೂಲಕ ಮಾಹಿತಿ ಪಡೆದರು. ಆದರೆ ಸಿಕ್ಕಿಬಿದ್ದ ವ್ಯಕ್ತಿ ಪೊಲೀಸ್ ಎಂದು ತಿಳಿದು ಬಂದಿದೆ.

ಸೋಮನಾಥ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದಕ್ಕೆ ಕಳ್ಳತನ ಮಾಡಲು ಗೋಡೆ ಹತ್ತಿ ವ್ಯಕ್ತಿಯೊಬ್ಬ ಪ್ರವೇಶಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡ ಜಿತೇಂದ್ರ ಸಿಂಗ್ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಆತನ ವಿಚಾರಣೆ ನಡೆಸಿದಾಗ ದುಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನ್ಸ್​​ಟೇೆಬಲ್ ಎಂಬ ವಿಚಾರ ಬೆಳಕಿಗೆ ಬಂದಿದೆ.

ತನಿಖೆ ನಡೆಸಿದಾಗ ಆರೋಪಿ ಮತ್ತು ಆತನ ಸಹಚರರು ಮಂಗಳವಾರ ಬೆಳಗ್ಗೆಯೂ ಕಳ್ಳತನ ನಡೆಸಿರುವುದು ಪತ್ತೆಯಾಗಿದೆ. ಸದ್ಯ ಆರೋಪಿ ಪೊಲೀಸ್ ಕಾನ್ಸ್​ಟೇಬಲ್​​ನನ್ನು ವಿಚಾರಣೆ ನಡೆಸಲಾಗುತ್ತಿದೆ. ಜತೆಗೆ ಇತರ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

ಇದನ್ನೂ ಓದಿ: ಮುಂಬೈ: ₹1,400 ಕೋಟಿ ಮೌಲ್ಯದ ಮೆಫೆಡ್ರೊನ್ ಡ್ರಗ್ಸ್​ ವಶ, ಐವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.