ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ಕುಂದ್ರಾ ಅವರ ಮೇಲಿನ ಅಶ್ಲೀಲ ವಿಡಿಯೋ ಚಿತ್ರೀಕರಣ ಆರೋಪ ಪ್ರಕರಣ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ.
ರಾಜ್ಕುಂದ್ರಾ ಅವರ ಮೊಬೈಲ್, ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್ ಡ್ರೈವ್ನಲ್ಲಿ 119 ಪೋರ್ನ್ ವಿಡಿಯೋ(ಅಶ್ಲೀಲ ವಿಡಿಯೋ)ಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆತ ಈ ವಿಡಿಯೋಗಳನ್ನು 9 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸುತ್ತಿದ್ದ ಎಂದು ಮುಂಬೈ ಪೊಲೀಸ್ ಅಪರಾಧ ವಿಭಾಗ ತಿಳಿಸಿದೆ.
ಅಶ್ಲೀಲ ಚಿತ್ರಗಳ ತಯಾರಿಕೆ ಸಂಬಂಧ ಬಂಧಿಯಾಗಿದ್ದ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್, 50 ಸಾವಿರ ರೂ ಮೊತ್ತದ ಶೂರಿಟಿ ಬಾಂಡ್ ಪಡೆದು ಬೇಲ್ ನೀಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಇತ್ತೀಚೆಗೆ ಕುಂದ್ರಾ ವಿರುದ್ಧ 1,400 ಪುಟಗಳ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅಲ್ಲದೇ ಅಧಿಕಾರಿಗಳು, ನಟಿ ಶಿಲ್ಪಾಶೆಟ್ಟಿ ಸೇರಿ 43 ಸಾಕ್ಷಿಗಳ ಹೇಳಿಕೆಗಳನ್ನು ಪಟ್ಟಿ ಮಾಡಿದ್ರು.
ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಕುಂದ್ರಾ
ಬಳಿಕ ರಾಜ್ ಕುಂದ್ರಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ಹೇಳಿಕೆ ನೀಡಿದ್ದರು. ರಾಜ್ ಕುಂದ್ರಾ ಇದರಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಹಾಗಾಗಿ ಜಾಮೀನು ನೀಡುವಂತೆ ಉದ್ಯಮಿಯ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಇವರ ಮನವಿ ಆಲಿಸಿದ ನ್ಯಾಯಾಲಯ ಜಾಮೀನು ನೀಡಿದೆ.
ಇದನ್ನೂ ಓದಿ: ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರು
ಅಶ್ಲೀಲ ಚಿತ್ರ ನಿರ್ಮಾಣ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಉದ್ಯಮಿ ರಾಜ್ ಕುಂದ್ರಾ ಸೇರಿದಂತೆ ನಾಲ್ವರನ್ನು ಮುಂಬೈ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಜುಲೈ 19ರಂದು ಬಂಧಿಸಿದ್ದರು.