ಪ್ರಯಾಗ್‌ರಾಜ್(ಉತ್ತರ ಪ್ರದೇಶ): ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಕುಮಾರ್ ದೇಶ್ವಾಲ್ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಜೀಪ್ಗೆ ನೀಲ್ಗಾಯ್ ಡಿಕ್ಕಿ ಹೊಡೆದಿದ್ದು, ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳು ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಎಸಿಪಿ ಹಂಡಿಯಾ ಸುಧೀರ್ ಕುಮಾರ್ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದು, ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಅಪಘಾತ ಪ್ರಕರಣ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಹೊರವಲಯದ ನೀರಾವರಿ ಕಚೇರಿ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದ ಸಂತೋಷ್ ಗೌಡಗಾಂವ (40), ಶಂಕರ ಜಳಕಿ (55) ಹಾಗೂ ಅವರ ಪತ್ನಿ ಸಿದ್ದಮ್ಮ ಜಳಕಿ, ಮೊಮ್ಮಗ ಹುಚ್ಚಪ್ಪ ದೊಡ್ಡಮನಿ (5) ಸಾವನ್ನಪ್ಪಿದ್ದರು. ಮಗುವಿನ ತಾಯಿ ಪೂಜಾ ದೊಡ್ದಮನಿ ಅವರಿಗೆ ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ: ಕಣಿವೆ ನಾಡಿನಲ್ಲಿ ಉಗ್ರರ ಅಟ್ಟಹಾಸ, ಹುತಾತ್ಮ ಯೋಧರ ಸಂಖ್ಯೆ ಐದಕ್ಕೇರಿಕೆ