ETV Bharat / bharat

ಪುಲ್ವಾಮಾ: ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು! - ಪುಲ್ವಾಮಾ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Police officer shot dead in Pulwama
ಸಾಂದರ್ಭಿಕ ಚಿತ್ರ
author img

By

Published : Jun 18, 2022, 7:44 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆಯೊಳಗೆ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ.

ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಪಾಂಪೋರ್ ಪ್ರದೇಶದ ಸಂಬೂರಾದಲ್ಲಿ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೇಲೆ ಹಲ್ಲೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲ ತಿಂಗಳಿಂದ ಜಮ್ಮು - ಕಾಶ್ಮೀರದಲ್ಲಿ ನಿರಂತರ ದಾಳಿಗಳು ಮುಂದುವರೆದಿವೆ. ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ನಿತ್ಯವೂ ಎನ್​​ಕೌಂಟರ್ ಮುಂದುವರೆದಿವೆ.

ಇದನ್ನೂ ಓದಿ: ಸೇನೆ ಸೇರುವ ಬಯಕೆ ಹೊಂದಿದ್ದ ರೈತನ ಮಗ 'ಅಗ್ನಿಪಥ' ಹಿಂಸಾಚಾರಕ್ಕೆ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.