ಹೈದರಾಬಾದ್: ಇಲ್ಲಿನ ರಂಗಾರೆಡ್ಡಿ ಜಿಲ್ಲೆಯ ಹಯಾತ್ ನಗರ ಪಸುಮಾಮೂಲೆಯಲ್ಲಿ ಯುವಕನ ಹುಟ್ಟುಹಬ್ಬ ಆಚರಣೆಯಲ್ಲಿ ಗಾಂಜಾ ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ಹುಡುಗಿಯರು ಸೇರಿದಂತೆ 29 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರೆಲ್ಲರೂ ಸಿಬಿಐಟಿ ಮತ್ತು ಎಂಜಿಐಟಿ ಕಾಲೇಜುಗಳ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ 11 ಕಾರು, ಒಂದು ಬೈಕ್ ಮತ್ತು 28 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿಗಳ ಪೋಷಕರಿಗೆ ಕೌನ್ಸೆಲಿಂಗ್ ಮಾಡಿದ್ದು ಬುಧವಾರ ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ಬರುವಂತೆ ಸೂಚಿಸಿದ್ದಾರೆ. ಬಳಿಕ ವಶದಲ್ಲಿದ್ದವರನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು ಡ್ರಗ್ಸ್ ಬಲೆಯಲ್ಲಿ ಸಿಕ್ಕಿ ಟೆಕ್ಕಿಗಳು, ವಿದ್ಯಾರ್ಥಿಗಳು ವಿಲವಿಲ.. ಎರಡು ತಿಂಗಳಲ್ಲಿ 27 ಆರೋಪಿಗಳ ಬಂಧನ