ETV Bharat / bharat

ಕಾನ್ಪುರ ಹಿಂಸಾಚಾರ ಪ್ರಕರಣ: 40 ಗಲಭೆಕೋರರ ಚಿತ್ರ ಇರುವ ಪೋಸ್ಟರ್​ ಬಿಡುಗಡೆ - ಕಾನ್ಫುರ ಹಿಂಸಾಚಾರ ಪ್ರಕರಣ ಸಂಬಂಧ 40 ಗಲಭೆಕೋರರ ಚಿತ್ರ ಇರುವ ಪೋಸ್ಟರ್​ ಬಿಡುಗಡೆ ಮಾಡಿದ ಪೊಲೀಸರು

ಕಿಡಿಗೇಡಿಗಳ ಬಗ್ಗೆ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ವಾಟ್ಸಪ್ ನಂಬರ್ ನೀಡಲಾಗಿದೆ. ಮಾಹಿತಿ ನೀಡುವವರ ಗುರುತು ಬಹಿರಂಗಪಡಿಸುವುದಿಲ್ಲ ಎಂದು ಪೊಲೀಸರು ಈ ವೇಳೆ ಭರವಸೆ ನೀಡಿದ್ದಾರೆ.

ಕಾನ್ಪುರದಲ್ಲಿ ಶುಕ್ರವಾರ ನಡೆದ ಹಿಂಸಾಚಾರ ಚ
ಕಾನ್ಪುರದಲ್ಲಿ ಶುಕ್ರವಾರ ನಡೆದ ಹಿಂಸಾಚಾರ ಚ
author img

By

Published : Jun 6, 2022, 7:38 PM IST

ಕಾನ್ಪುರ (ಉತ್ತರ ಪ್ರದೇಶ): ಕಾನ್ಪುರದಲ್ಲಿ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 40 ಮಂದಿಯ ಛಾಯಾಚಿತ್ರಗಳಿರುವ ಪೋಸ್ಟರ್​ನ್ನು ಉತ್ತರ ಪ್ರದೇಶದ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಕಿಡಿಗೇಡಿಗಳ ಬಗ್ಗೆ ಮಾಹಿತಿ ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡುವಂತೆ ವಾಟ್ಸಪ್ ನಂಬರ್ ನೀಡಲಾಗಿದೆ. ಮಾಹಿತಿ ನೀಡುವವರ ಗುರುತು ಬಹಿರಂಗಪಡಿಸುವುದಿಲ್ಲ ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 38 ಜನರನ್ನು ಬಂಧಿಸಲಾಗಿದ್ದು, ಎಫ್‌ಐಆರ್‌ನಲ್ಲಿ 1,000 ಹೆಸರಿಲ್ಲದ ವ್ಯಕ್ತಿಗಳಿದ್ದಾರೆ. ಆರೋಪಿಗಳನ್ನು ಬಂಧಿಸಲು ಸಹಕಾರ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಾನ್ಪುರದಲ್ಲಿ ಶುಕ್ರವಾರ ನಡೆದ ಹಿಂಸಾಚಾರ ಚ
ಕಾನ್ಪುರದಲ್ಲಿ ಶುಕ್ರವಾರ ನಡೆದ ಹಿಂಸಾಚಾರ

ಜೂನ್ 3 ರಂದು ಕಾನ್ಪುರ ನಗರದ ಯತೀಂಖಾನಾ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಸಂಚು ರೂಪಿಸಿದ ಪ್ರಮುಖ ಆರೋಪಿ ಜಾಫರ್ ಹಶ್ಮಿ ಮತ್ತು ಆತನ 3 ಸಹಚರರು ಸೇರಿದಂತೆ 40 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ 1,000 ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ.

ಇದರ ಮಾಸ್ಟರ್ ಮೈಂಡ್ ಹಯಾತ್ ಜಾಫರ್ ಹಶ್ಮಿ ಅವರ ಮೊಬೈಲ್‌ ವಶಕ್ಕೆ ಪಡೆದಿರುವ ಪೊಲೀಸರು 141 ವಾಟ್ಸಪ್ ಗ್ರೂಪ್‌ಗಳನ್ನು ಪತ್ತೆ ಮಾಡಿದ್ದಾರೆ. ನಗರದ ವಿವಿಧ ಪ್ರದೇಶಗಳಿಂದ ಎಂಎಂಎ ಜೋಹರ್ ಅಭಿಮಾನಿಗಳ ಸಂಘ ಹಾಗೂ ಇತರೆ ಸಂಘಟನೆಗಳ ಪದಾಧಿಕಾರಿಗಳನ್ನು ಗಲಭೆಗೆ ಕರೆಸಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಲ್ಪೆ ಬೀಚ್​ನಲ್ಲಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.