ಚಮೋಲಿ (ಉತ್ತರಾಖಂಡ): ಪೋಖರಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದವರನ್ನು ತೆರವುಗೊಳಿಸಲು ತೆರಳಿದ್ದ ಪೊಲೀಸರು ಹಾಗೂ ಅಧಿಕಾರಿಗಳ ಮೇಲೆ ದಾಳಿಕೋರರು ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಎಂಟು ಮಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಕೇಂದ್ರದಿಂದ ಹೆಚ್ಚುವರಿ ಪೊಲೀಸ್ ಪಡೆ ಕಳಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶ್ವಂತ್ ಸಿಂಗ್ ಚೌಹಾಣ್, ಕಳೆದ ಹಲವು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಕೆಲ ಜನರು ಅಕ್ರಮವಾಗಿ ವಾಸಿಸುತ್ತಿದ್ದರು. ಅವರನ್ನು ತೆರವುಗೊಳಿಸಲು ಹೋಗಿದ್ದ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳೆದ ಕೆಲ ದಿನಗಳಿಂದ ದೇವಸ್ಥಾನ ಗ್ರಾಮ ಹಾಗೂ ಪೋಖರಿ ಮಾರುಕಟ್ಟೆ ನಡುವೆ ಇದ್ದ ವ್ಯಾನ್ ಪ್ರದೇಶದಲ್ಲಿ ಕೆಲ ಜನರು ಅಕ್ರಮವಾಗಿ ವಾಸಿಸುತ್ತಿದ್ದರು. ಆ ಗುಂಪನ್ನು ತೆರವುಗೊಳಿಸಲು ತೆರಳಿದ್ದ ವೇಳೆ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.