ಶ್ರೀನಗರ (ಜಮ್ಮು ಕಾಶ್ಮೀರ): ಪೊಲೀಸ್ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕನೋರ್ವ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆಸಿದೆ.
ಇಲ್ಲಿನ ಶಜ್ಘಾರಿಫೊರಾ ಎಂಬಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, ಚೆಕ್ ಪಾಯಿಂಟ್ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆದಿದೆ. ಈ ವೇಳೆ ಕಾನ್ಸ್ಟೇಬಲ್ ಫಾರೂಕ್ ಅಹ್ಮದ್ ಹಾಗೂ ಓರ್ವ ನಾಗರಿಕ ಗಾಯಗೊಂಡಿದ್ದಾರೆ.
ಓದಿ: ಗಡಿ ದಾಟಿ ಬಂದಿದ್ದ ಇಬ್ಬರು ಪಾಕಿಸ್ತಾನಿ ಬಾಲಕಿಯರನ್ನು ಬಂಧಿಸಿದ ಸೇನೆ
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಆರೋಗ್ಯವೂ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ದಾಳಿ ಮಾಡಿದ ಉಗ್ರರಿಗಾಗಿ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.