ಶ್ರೀನಗರ, ಜಮ್ಮು-ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Security Forces) ನಡುವಿನ ಎನ್ಕೌಂಟರ್ ಜಮ್ಮು ಕಾಶ್ಮೀರದಲ್ಲಿ (Jammu Encounter) ಮುಂದುವರೆಯುತ್ತಲೇ ಇದೆ.
ಭಯೋತ್ಪಾದಕರ ಅಡಗುದಾಣದ ಮೇಲೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಕಾರಣ ಓರ್ವ ಪೊಲೀಸ್ಗೆ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾನುವಾರ ಸಂಜೆ ಭದ್ರತಾ ಪಡೆಗಳ ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿತ್ತು. ಇದಾದ ನಂತರ ಭಯೋತ್ಪಾದಕರ ಪತ್ತೆಗಾಗಿ ಶೋಧ ಕಾರ್ಯವನ್ನು ಶ್ರೀನಗರದ ಜಮ್ಲತಾ ಪ್ರದೇಶದಲ್ಲಿ ಭದ್ರತಾ ಪಡೆ ಕೈಗೊಂಡಿತ್ತು. ಈ ವೇಳೆ ಹಲವು ಸುತ್ತಿನ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ಗೆ ಗಾಯವಾಗಿದೆ.
ಈ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ (Dilbagh Singh) ಮಾಹಿತಿ ನೀಡಿದ್ದು, ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.
ಇದನ್ನೂ ಓದಿ: ಸರ್ವಾಧಿಕಾರಿ ಗಡಾಫಿ ಪುತ್ರನಿಂದ ಲಿಬಿಯಾ ಅಧ್ಯಕ್ಷೀಯ ಚುನಾವಣೆಗೆ ನಾಮಿನೇಷನ್