ETV Bharat / bharat

ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮ..ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿ - Video

ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದ ಪೊಲೀಸ್ ಅಧಿಕಾರಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

author img

By

Published : Sep 13, 2021, 9:14 AM IST

ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮ
ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮ

ಶ್ರೀನಗರ(ಜಮ್ಮು-ಕಾಶ್ಮೀರ): ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಅರ್ಷಿದ್​​ ಅಹ್ಮದ್ ಹುತಾತ್ಮರಾಗಿದ್ದಾರೆ. ಅವರ ಅಂತಿಮ ಸಂಸ್ಕಾರದ ವೇಳೆ ಅಧಿಕಾರಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪೊಲೀಸ್ ಅಧಿಕಾರಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿ

ಬಳಿಕ ಮಾತನಾಡಿದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್, ಈಗಾಗಲೇ ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದರು.

ಶ್ರೀನಗರದ ಖನ್ಯಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ ಚೆಕ್​ಪೋಸ್ಟ್​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ, ದುಷ್ಕರ್ಮಿಗಳು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಅರ್ಷಿದ್ ಅಹ್ಮದ್ ತಲೆಗೂ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದರು.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದುಷ್ಕೃತ್ಯವೆಸಗಿದ ಬಳಿಕ ದಾಳಿಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದಾಳಿಕೋರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರಾಜಕೀಯ ನಾಯಕರಿಂದ ಸಂತಾಪ

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಅಹ್ಮದ್ ಸಾವಿನ ಸುದ್ದಿ ಕೇಳಿ ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು. ಇವರ ಸಾವು ಅತ್ಯಂತ ದುರದೃಷ್ಟಕರ, ಅಮಾನವೀಯ ಘಟನೆ ಎಂದು ಕಾಂಗ್ರೆಸ್ ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.