ETV Bharat / bharat

ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್ - ಶರದ್ ಪವಾರ್ ಭೇಟಿ - ಪ್ರಶಾಂತ್ ಕಿಶೋರ್-ಶರದ್ ಪವಾರ್ ಭೇಟಿ

ರಾಜಕೀಯ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಮುಂಬೈನಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರನ್ನು ಭೇಟಿಯಾಗಿದ್ದಾರೆ.

Political strategist Prashant Kishor meets Sharad Pawar
ಪ್ರಶಾಂತ್ ಕಿಶೋರ್-ಶರದ್ ಪವಾರ್ ಭೇಟಿ
author img

By

Published : Jun 11, 2021, 5:23 PM IST

ಮುಂಬೈ: ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಟಿಎಂಸಿ ಹಾಗೂ ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಚುನಾವಣಾ ತಂತ್ರಗಾರನಾಗಿ ಕಾರ್ಯ ನಿರ್ವಹಿಸಿದ್ದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಇದೀಗ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವ​ರನ್ನು ಭೇಟಿಯಾಗಿದ್ದಾರೆ. ಇವರ ಈ ಭೇಟಿಯು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ್ದು, ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಮಹಾರಾಷ್ಟ್ರದ ಮುಂಬೈನಲ್ಲಿರುವ ಪವಾರ್​ ನಿವಾಸದಲ್ಲಿ ಕಿಶೋರ್​ ಭೇಟಿಯಾಗಿದ್ದು, ಇಬ್ಬರೂ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಆದರೆ, ಇವರಿಬ್ಬರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನಡೆಸಿಲ್ಲ.

ಇದನ್ನೂ ಓದಿ: 'ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದ್ರೆ ಬೂಟ್​ ಹಾಕುವುದಿಲ್ಲ' ನಿಜವಾಯ್ತು ಪ್ರಶಾಂತ್​ ಕಿಶೋರ್​​ ಭವಿಷ್ಯ!

2019ರಲ್ಲಿ ಇಂದಿನ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆಯನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿದ್ದರು. ಬಳಿಕ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಇತ್ತೀಚೆಗೆ ತಮಿಳುನಾಡು ಮತ್ತು ಬಂಗಾಳದಲ್ಲಿ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ಸಹಾಯ ಮಾಡಿದ್ದ ಕಿಶೋರ್​, ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಹಾಗೂ ಡಿಎಂಕೆ ಜಯ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚುನಾವಣಾ ಫಲಿತಾಂಶದ ಬಳಿಕ ಇವರು ತಾವು ಇನ್ಮುಂದೆ ಚುನಾವಣಾ ತಂತ್ರಗಾರನಾಗಿ ಮುಂದುವರೆಯುವುದಿಲ್ಲ ಎಂದು ಹೇಳಿದ್ದರು. ಆದರೆ ಇಂದು ಶರದ್​ ಪವಾರ್​ರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.