ETV Bharat / bharat

2014ಕ್ಕಿಂತ ಮೊದಲು ತಂತ್ರಜ್ಞಾನ ಬಳಕೆಯ ಬಗ್ಗೆ ಅಸಡ್ಡೆಯ ವಾತಾವರಣವಿತ್ತು: ಪ್ರಧಾನಿ ಮೋದಿ

ಹಿಂದಿನ ಸರ್ಕಾರಗಳ ಅವಧಿಯಲ್ಲಿ ತಂತ್ರಜ್ಞಾನವನ್ನು ಸಮಸ್ಯೆಯ ಒಂದು ಭಾಗವೆಂದು ಪರಿಗಣಿಸಲಾಗಿತ್ತು. ತಂತ್ರಜ್ಞಾನಕ್ಕೆ ಬಡವರ ವಿರೋಧಿ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಇದರಿಂದಾಗಿ 2014ಕ್ಕಿಂತ ಮೊದಲು ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಬಡವರು, ವಂಚಿತರು, ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು ಎಂದು ಡ್ರೋಣ್‌ ಮಹೋತ್ಸವ ಉದ್ಘಾಟಿಸಿ ಪ್ರಧಾನಿ ಮೋದಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ
ಮೋದಿ
author img

By

Published : May 27, 2022, 1:02 PM IST

ನವದೆಹಲಿ: 2014ಕ್ಕಿಂತ ಮೊದಲು ಆಡಳಿತದಲ್ಲಿ ತಂತ್ರಜ್ಞಾನ ಬಳಕೆಯ ಕುರಿತು ಅಸಡ್ಡೆಯ ವಾತಾವರಣವಿತ್ತು. ಇದರಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 'ಭಾರತ್ ಡ್ರೋನ್ ಮಹೋತ್ಸವ 2022' ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.

ಆದ್ರೆ ಈ ದಿನಮಾನಗಳಲ್ಲಿ ಡ್ರೋನ್ ತಂತ್ರಜ್ಞಾನದ ಬಗ್ಗೆ ಭಾರತದಲ್ಲಿ ಕಂಡುಬರುತ್ತಿರುವ ಉತ್ಸಾಹ ಅದ್ಭುತವಾಗಿದೆ. ಇದು ದೇಶದಲ್ಲಿ ಉದ್ಯೋಗ ಸೃಷ್ಟಿಯನ್ನು ಸೂಚಿಸುತ್ತಿದೆ. ಕಳೆದ ಎಂಟು ವರ್ಷಗಳಿಂದ ನಾವು ಹೊಸ ಹೊಸ ತಂತ್ರಜ್ಞಾಗಳನ್ನು ಜಾರಿಗೆ ತರಲು ಪ್ರಾರಂಭಿಸಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದೆ. ಅವರ ಜೀವನ ಮತ್ತು ವ್ಯವಹಾರವನ್ನು ಸುಲಭಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು.

  • India has the potential of becoming a global drone hub. Speaking at Bharat Drone Mahotsav in New Delhi. https://t.co/eZEMMQrRsF

    — Narendra Modi (@narendramodi) May 27, 2022 " class="align-text-top noRightClick twitterSection" data=" ">

ಹಿಂದಿನ ಸರ್ಕಾರಗಳ ಅವಧಿಯಲ್ಲಿ ತಂತ್ರಜ್ಞಾನವನ್ನು ಸಮಸ್ಯೆಯ ಒಂದು ಭಾಗವೆಂದೇ ಪರಿಗಣಿಸಲಾಗಿತ್ತು. ಬಡವರ ವಿರೋಧಿ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಇದರಿಂದಾಗಿ 2014ಕ್ಕಿಂತ ಮೊದಲು ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಪರಿಣಾಮ ಬಡವರು, ವಂಚಿತರು, ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಡ್ರೋನ್​ಗಳನ್ನು ಪ್ರಸ್ತುತ ಕಣ್ಗಾವಲು, ಸಮೀಕ್ಷೆ, ಸಾರಿಗೆ, ಕೃಷಿ, ಕ್ರೀಡೆ, ರಕ್ಷಣೆ ಮತ್ತು ವಿಪತ್ತು ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಬಳಸಲಾಗುತ್ತಿದೆ. ದೇಶದಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆಯು ದೊಡ್ಡ ಕ್ರಾಂತಿಗೆ ಕಾರಣವಾಗುತ್ತಿದೆ. ಡ್ರೋನ್ ತಂತ್ರಜ್ಞಾನದ ಅಡಿಯಲ್ಲಿ ಮೊದಲ ಬಾರಿಗೆ ಹಳ್ಳಿಗಳಲ್ಲಿನ ಪ್ರತಿಯೊಂದು ಆಸ್ತಿಯನ್ನು ಡಿಜಿಟಲ್ ಮ್ಯಾಪ್ ಮಾಡಲಾಗುತ್ತಿದೆ ಮತ್ತು ಡಿಜಿಟಲ್ ಆಸ್ತಿ ಕಾರ್ಡ್‌ಗಳನ್ನು ಜನರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

'ಭಾರತ್ ಡ್ರೋನ್ ಮಹೋತ್ಸವ- 2022' ಮೇ 27 ಮತ್ತು 28 ರಂದು ಎರಡು ದಿನಗಳ ಕಾಲ ನಿಗದಿಯಾಗಿದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಪರಿಸರ ಸಚಿವ ಭೂಪೇಂದರ್ ಯಾದವ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಪೊಲೀಸರಿಗೆ ಪಿಸ್ತೂಲ್‌ನಿಂದ ಬೆದರಿಸಿದ ದೆಹಲಿ ಗಲಭೆಕೋರನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ! ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.