ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್ಗಳಲ್ಲಿ ಪ್ರಕಟಿಸುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ರಾಜ್ ಕುಂದ್ರಾರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಂಧನದ ಬಳಿಕ ರಾಜ್ ಕುಂದ್ರಾ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಕರೆತರಲಾಗಿದೆ.
ಫೆಬ್ರುವರಿ ತಿಂಗಳಲ್ಲಿ ರಾಜ್ ಕುಂದ್ರಾ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬಳಿಕ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದ ರಾಜ್ ಕುಂದ್ರಾ, ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದರು.