ಪೊಂಡೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪೊಂಡೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪಿಸುವ ಸಾಧ್ಯತೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ.
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಿಮಿತ್ತ ಪೊಂಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿರ್ಮಲಾ ಸೀತಾರಾಮನ್, ''ಪೊಂಡೂರು ಖದ್ದರ್'' (ಖಾದಿ), ಇದು ಆಂಧ್ರಪ್ರದೇಶದ ಅತ್ಯಂತ ಪ್ರಸಿದ್ಧ ಕೈಮಗ್ಗ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಜಾಗತಿಕವಾಗಿ ಹೆಸರುವಾಸಿಯಾಗಿದೆ. ಪೊಂಡೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪಿಸುವ ಬಗ್ಗೆ ಕೇಂದ್ರ ಜವಳಿ ಸಚಿವರೊಂದಿಗೆ ಮಾತನಾಡುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತೀಯ ಇತಿಹಾಸದಲ್ಲೇ ವಿಶೇಷತೆ ಹೊಂದಿದೆ 'ರಾಷ್ಟ್ರೀಯ ಕೈಮಗ್ಗ ದಿನ': ಹೇಗೆ ಗೊತ್ತಾ?
ಪೊಂಡೂರು ಖಾದಿಗೆ ಅಂತಾರಾಷ್ಟ್ರೀಯ ಮನ್ನಣೆ ಇದೆ. ಆದರೆ, ನೇಕಾರರು ವಿವಿಧ ಕಾರಣಗಳಿಂದ ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಉತ್ತಮ ಗುಣಮಟ್ಟ ಮತ್ತು ವಿನ್ಯಾಸಕ್ಕೆ ಹೆಸರುವಾಸಿಯಾದ ಪೊಂಡೂರು ಖಾದಿಯ ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲು ಹಲವಾರು ಕ್ರಮಗಳ ಅಗತ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಖಾದಿಯನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸಲು ಬದ್ದರಾಗಿದ್ದಾರೆ ಎಂದು ವಿತ್ತ ಸಚಿವೆ ಹೇಳಿದರು.