ರಾಜ್ಕೋಟ್ (ಗುಜರಾತ್): ರಾತ್ರಿ ಸಮಯದಲ್ಲಿ ವಿದ್ಯುತ್ ಪೂರೈಕೆ ಖಂಡಿಸಿ ರಾಜ್ಕೋಟ್ ಸಮೀಪದ ಉಪ್ಲೆಟಾ ಪಂಠಕ್ ಗ್ರಾಮಸ್ಥರು ವಿನೂತನ ರೀತಿ ಪ್ರತಿಭಟನೆ ನಡೆಸುವ ಮೂಲಕ ವಿದ್ಯುತ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯುತ್ಗಾಗಿ ಆಗ್ರಹಿಸಿ ಅಂತ್ಯ ಸಂಸ್ಕಾರ ನಡೆಸುವ ಮೂಲಕ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಗ್ರಾಮಸ್ಥರು, ರಾತ್ರಿ ವೇಳೆ ವಿದ್ಯುತ್ ಪೂರೈಕೆಯಿಂದಾಗಿ ತಾವು ಸಾಕಷ್ಟು ಸಮಸ್ಯೆ ಎದುರಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಾತ್ರಿ ಹೊತ್ತು ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಕೃಷಿ ಭೂಮಿಗಳಿಗೆ ನೀರು ಹಾಯಿಸಲು ಸೇರಿದಂತೆ ಇತರೆ ಕೃಷಿ ಚಟುವಟಿಕೆಗೆ ಅನಿವಾರ್ಯವಾಗಿ ಕತ್ತಲಲ್ಲೇ ತೆರಳುವ ಪರಿಸ್ಥತಿ ಎದುರಾಗಿದೆ. ಈ ಸಮಯದಲ್ಲಿ ದಟ್ಟ ಚಳಿ ಹವಾಮಾನ ಹಾಗೂ ಕಾಡು ಪ್ರಾಣಿಗಳಿಂದ ತೊಂದರೆ ಪಡುತ್ತಿದ್ದು, ವಿದ್ಯುತ್ ಅನ್ನು ಹಗಲಿರುಳು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾತ್ರಿ ವೇಳೆ ಮಾತ್ರ ವಿದ್ಯುತ್: ರಾತ್ರಿ ಸಮಯದಲ್ಲಿ ಕೃಷಿ ಭೂಮಿಯಲ್ಲಿ ವಿದ್ಯುತ್ ಇಲ್ಲದ ಕಾರಣ ಅನೇಕ ಜೀವಭಯಗಳನ್ನು ಎದುರಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಾತ್ರಿ ಹೊತ್ತು ಮಾತ್ರ ವಿದ್ಯುತ್ ನೀಡುತ್ತಿರುವುದರಿಂದಾಗಿ ಬಲವಂತವಾಗಿ ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ಅನಿವಾರ್ಯತೆ ಎದುರಾಗಿದೆ. ಭಾರೀ ಚಳಿಯಲ್ಲಿ ಕೃಷಿ ಕೆಲಸದಲ್ಲಿ ತೊಡಗುತ್ತಿರುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಚಳಿಯಲ್ಲಿ ಕೆಲಸ ಮಾಡುತ್ತಿರುತ್ತಿರುವ ಕೃಷಿಕರ ಸಾವು ಕೂಡ ವರದಿಯಾಗಿದ್ದು, ಈ ಹಿನ್ನೆಲೆ ವಿದ್ಯುತ್ ಪೂರೈಕೆ ಸಮಯವನ್ನು ಬದಲಾವಣೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಈ ಸಂಬಂಧ 'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಪ್ರತಿಭಟನಾನಿರತ ರೈತರು, ರಾತ್ರಿ ಹೊತ್ತು ಬದಲಾಗಿ ಬೆಳಗಿನ ಹೊತ್ತು ವಿದ್ಯುತ್ ನೀಡುವುದರಿಂದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. ರಾತ್ರಿ ಹೊತ್ತು ಕಾಡು ಪ್ರಾಣಿಗಳ ದಾಳಿ ಅಪಾಯ ಹೆಚ್ಚಿದೆ. ಈ ಹಿನ್ನೆಲೆ ಗ್ರಾಮಸ್ಥರು ಅಂತ್ಯ ಸಂಸ್ಕಾರದ ಮೆರವಣಿಗೆ ನಡೆಸುವ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಯನ್ನು ಇಟ್ಟಿದ್ದಾರೆ.
ಅಂತ್ಯಕ್ರಿಯೆ ಮಾಡುವ ಮೂಲಕ ಪ್ರತಿಭಟನೆ: ರಾತ್ರಿ ಸಮಯದಲ್ಲಿ ವಿದ್ಯುತ್ ನೀಡುತ್ತಿರುವ ಕ್ರಮಕ್ಕೆ ಉಪ್ಲೆಟಾ ತಾಲೂಕು ಪಂಚಾಯತ್ ಕೂಡ ಸರ್ಕಾರಕ್ಕೆ ಸಮಯವನ್ನು ಬದಲಾಯಿಸುವಂತೆ ಬೇಡಿಕೆ ಇಟ್ಟಿದೆ. ಅಲ್ಲದೇ ಗ್ರಾಮಸ್ಥರು ಮತ್ತು ಅವರ ಕುಟುಂಬಸ್ಥರು ಗ್ರಾಮದಲ್ಲಿ ವಿದ್ಯುತ್ ಅಂತ್ಯಸಂಸ್ಕಾರ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಗ್ರಾಮಸ್ಥರು ಇದೇ ಮೊದಲ ಬಾರಿಗೆ ಸಮಯ ಬದಲಾವಣೆ ಮಾಡುವಂತೆ ಆಗ್ರಹಿಸಿದ್ದಾರೆ.
ಈ ರೀತಿ ವಿಶಿಷ್ಟ ಪ್ರತಿಭಟನೆ ನಡೆಸುವ ಮೊದಲು ಕೂಡ ಗ್ರಾಮಸ್ಥರು ಈ ಸಂಬಂಧ ಕಲೆಕ್ಟರ್ಗೆ ತಮ್ಮ ಸಮಸ್ಯೆಯನ್ನು ತಿಳಿಸಿ ಮನವಿ ಸಲ್ಲಿಸಿದ್ದಾರೆ. ಆದರೂ ಇದರಿಂದ ಯಾವುದೇ ಪರಿಹಾರವನ್ನು ಅವರು ಪಡೆದಿಲ್ಲ. ಈ ಹಿನ್ನಲೆ ಅವರು ವಿದ್ಯುತ್ ಅಂತ್ಯ ಸಂಸ್ಕಾರ ಯಾತ್ರೆ ನಡೆಸುವ ಮೂಲಕ ಅಧಿಕಾರಿಗಳು ಮತ್ತು ಸರ್ಕಾರದ ಗಮನ ಸೆಳೆಯಲು ಮುಂದಾದರು. ಈ ಸಂಬಂಧ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳದೇ ಹೋದಲ್ಲಿ ತಮ್ಮ ಈ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ: ದಟ್ಟ ಹೊಗೆಗೆ ಉಸಿರುಗಟ್ಟಿ ವೈದ್ಯ ದಂಪತಿ ಸೇರಿ ಐವರ ಸಾವು