ಅಮೃತಸರ್(ಪಂಜಾಬ್): 2022ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ಇದೀಗ ತಮ್ಮ ರಾಜಕೀಯ ಪ್ರಧಾನ ಸಲಹೆಗಾರನಾಗಿ ಪ್ರಶಾಂತ್ ಕಿಶೋರ್ಗೆ ಸೇರಿಸಿಕೊಂಡಿದ್ದಾರೆ.
-
Happy to share that @PrashantKishor has joined me as my Principal Advisor. Look forward to working together for the betterment of the people of Punjab!
— Capt.Amarinder Singh (@capt_amarinder) March 1, 2021 " class="align-text-top noRightClick twitterSection" data="
">Happy to share that @PrashantKishor has joined me as my Principal Advisor. Look forward to working together for the betterment of the people of Punjab!
— Capt.Amarinder Singh (@capt_amarinder) March 1, 2021Happy to share that @PrashantKishor has joined me as my Principal Advisor. Look forward to working together for the betterment of the people of Punjab!
— Capt.Amarinder Singh (@capt_amarinder) March 1, 2021
2017ರ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿ ಸರ್ಕಾರ ರಚನೆ ಮಾಡುವಲ್ಲಿ ಅಮರೀಂದರ್ ಸಿಂಗ್ ಯಶಸ್ವಿಯಾಗಿದ್ದರು. ಇದೀಗ ಮತ್ತೊಂದು ಅವಧಿ ಮೇಲೆ ಕಣ್ಣಿಟ್ಟಿರುವ ಅವರು, ಚುನಾವಣಾ ರಣತಂತ್ರದ ಪರಿಣಿತ ಪ್ರಶಾಂತ್ ಕಿಶೋರ್ಗೆ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಮೂರು ತಿಂಗಳ ಬಳಿಕ ರಾಜಸ್ಥಾನಕ್ಕೆ ವಸುಂಧರಾ ರಾಜೇ.. ಮಾ. 8ರಿಂದ ಧಾರ್ಮಿಕ ಯಾತ್ರೆ!
ಈಗಾಗಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ರಾಜಕೀಯ ಸಲಹೆಗಾರನಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದಾರೆ.
2014ರಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ಪ್ರಶಾಂತ್ ಕಿಶೋರ್ ಇವರ ತಂಡದಲ್ಲಿ ಸಾಕಷ್ಟು ಯೋಜನೆ ಘೋಷಣೆ ಮಾಡಿದ್ದರು.