ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ರಾಷ್ಟ್ರಪತಿ ಅವರು ಡಿಸ್ಚಾರ್ಜ್ ಆಗಿದ್ದಾರೆ.
ಮುರ್ಮು ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಭಾನುವಾರ ಬೆಳಗ್ಗೆ ಸೇನಾ ಆಸ್ಪತ್ರೆಯಲ್ಲಿ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಹಾಗೆ ಅವರ ಎಡಗಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಅಕ್ಟೋಬರ್ 16 2022 ರಂದು ಸೇನಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಗುಜರಾತ್ ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ