ETV Bharat / bharat

ಬ್ರಿಟನ್​ ರಾಣಿಯ ಅಂತ್ಯಕ್ರಿಯೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು.. 17 ರಿಂದ ಲಂಡನ್​ಗೆ ಭೇಟಿ - ETV bharat kannada news

ಬ್ರಿಟನ್​ ರಾಣಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.17 ರಿಂದ ಲಂಡನ್​ ಪ್ರವಾಸ ಕೈಗೊಳ್ಳಲಿದ್ದಾರೆ.

president-droupadi-murmu-will-be-visiting-london
ಬ್ರಿಟನ್​ ರಾಣಿಯ ಅಂತ್ಯಕ್ರಿಯೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
author img

By

Published : Sep 14, 2022, 3:37 PM IST

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್​- II ಅವರ ಸಂತ್ಯಕ್ರಿಯೆ ಸೆಪ್ಟೆಂಬರ್​ 19 ರಂದು ನಡೆಯಲಿದ್ದು, ಭಾರತದ ಪರವಾಗಿ ಸಂತಾಪ ಸಲ್ಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್​ ಪ್ರವಾಸ ಕೈಗೊಳ್ಳಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್​ 17 ರಿಂದ 19 ರವರೆಗೆ ಲಂಡನ್​ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಭಾರತದ ಪರವಾಗಿ ಸಂತಾಪ ಸೂಚಿಸಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮುರ್ಮು ಅವರು ಪಯಣಿಸುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ.

ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಸೆಂಟ್ರಲ್ ಲಂಡನ್​ನ ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ನಡೆಯಲಿದೆ. ರಾಣಿಯ ಶವಪೆಟ್ಟಿಗೆಯನ್ನು ವಿಂಡ್ಸರ್ ಕ್ಯಾಸಲ್‌ಗೆ ಕೊಂಡೊಯ್ಯುವ ಮೂಲಕ 6ನೇ ಕಿಂಗ್ ಜಾರ್ಜ್ ಸ್ಮಾರಕ ಪ್ರಾರ್ಥನಾ ಮಂದಿರದಲ್ಲಿ ಅವರ ತಂದೆ 5ನೇ ಜಾರ್ಜ್ ಅವರ ಸಮಾಧಿಯ ಪಕ್ಕದಲ್ಲಿ ರಾಣಿಯನ್ನು ಸಮಾಧಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಬ್ರಿಟನ್ ಇತಿಹಾಸದಲ್ಲಿ ಅತಿ ಹೆಚ್ಚು ವರ್ಷ ಆಳ್ವಿಕೆ ನಡೆಸಿದ ಎರಡನೇ ಎಲಿಜಬೆತ್ ರಾಣಿ 96ನೇ ವಯಸ್ಸಿನಲ್ಲಿ ಇತ್ತೀಚೆಗೆ ನಿಧನರಾದರು.

ಓದಿ: ಅಕ್ರಮ ಹಣ ವರ್ಗಾವಣೆ: ತನಿಖೆಗೆ ಹಾಜರಾದ ನಟಿ ಜಾಕ್ವೆಲಿನ್​​ ಫರ್ನಾಂಡಿಸ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.