ನವದೆಹಲಿ: ಕೇಂದ್ರ ಸರ್ಕಾರದಿಂದ ಕೊಡಮಾಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕರ್ನಾಟಕದ ಐವರು ಸೇರಿದಂತೆ 119 ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
ವೈದ್ಯಕೀಯ ವಿಭಾಗದಲ್ಲಿ ಡಾ.ಬೆಳ್ಳೆ ಮೋನಪ್ಪ ಹೆಗ್ಡೆ ಅವರಿಗೆ ಪದ್ಮ ವಿಭೂಷಣ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ಹಿರಿಯ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ನೀಡಲಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಪರವಾಗಿ ಪಟ್ಟ ಶಿಷ್ಯರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಸ್ವೀಕರಿಸಿದರು.
ಕಲೆ ವಿಭಾಗದಲ್ಲಿ ಬಿ.ಮಂಜಮ್ಮ ಜೋಗತಿ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಗಾಗಿ ಕೆ.ವೈ.ವೆಂಕಟೇಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದ್ದಾರೆ.
ಖ್ಯಾತ ಗಾಯಕ ದಿ.ಎಸ್.ಪಿ. ಬಾಲಸುಬ್ರಹ್ಮಣ್ಯ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದಲ್ಲದೇ, ಟೋಕಿಯೋ ಓಲಿಂಪಿಕ್ನಲ್ಲಿ ಬೆಳ್ಳಿ ಸಾಧನೆ ಮಾಡಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಪದ್ಮಭೂಷಣ, ಮಾಜಿ ವಿದೇಶಾಂಗ ವ್ಯವಹಾರ ಸಚಿವೆಯಾಗಿದ್ದ ದಿ.ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರ ಪರವಾಗಿ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಪ್ರಶಸ್ತಿ ಸ್ವೀಕರಿಸಿದರು.
-
President Ram Nath Kovind, Vice President M. Venkaiah Naidu and Prime Minister Narendra Modi with the Padma Awardees at Rashtrapati Bhavan today. pic.twitter.com/SbPtdepadt
— President of India (@rashtrapatibhvn) November 8, 2021 " class="align-text-top noRightClick twitterSection" data="
">President Ram Nath Kovind, Vice President M. Venkaiah Naidu and Prime Minister Narendra Modi with the Padma Awardees at Rashtrapati Bhavan today. pic.twitter.com/SbPtdepadt
— President of India (@rashtrapatibhvn) November 8, 2021President Ram Nath Kovind, Vice President M. Venkaiah Naidu and Prime Minister Narendra Modi with the Padma Awardees at Rashtrapati Bhavan today. pic.twitter.com/SbPtdepadt
— President of India (@rashtrapatibhvn) November 8, 2021