ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಉತ್ತರ ಪ್ರದೇಶದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ನ ಹೊಸ ಕಟ್ಟಡ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಷ್ಟ್ರಪತಿಗಳ ಕಾರ್ಯಾಲಯ ಶುಕ್ರವಾರ ಮಾಹಿತಿ ನೀಡಿತ್ತು.
ಇದಕ್ಕೂ ಮೊದಲು ಆಗಸ್ಟ್ನ ಆರಂಭದಲ್ಲಿ ರಾಮನಾಥ್ ಕೋವಿಂದ್ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೆಲವು ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಈಗ ಸುಮಾರು ಒಂದು ತಿಂಗಳ ನಂತರ ರಾಷ್ಟ್ರಪತಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ: ಕೇಂದ್ರ ಸಚಿವ ರಾಣೆ ಪುತ್ರ, ಶಾಸಕ ಮತ್ತು ಶಾಸಕನ ಪತ್ನಿ ವಿರುದ್ಧ ಲುಕ್ಔಟ್ ನೋಟಿಸ್