ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ಸೇನಾ ಆಸ್ಪತ್ರೆ (ರೆಫರಲ್ ಮತ್ತು ರಿಸರ್ಚ್)ಯಲ್ಲಿ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ರಾಷ್ಟ್ರಪತಿ ಮುರ್ಮು ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಅಸ್ಸೋಂ ಪ್ರವಾಸ ಕೈಗೊಂಡಿದ್ದ ಮುರ್ಮು ಅವರು, ಗುವಾಹಟಿಯ ಶಕ್ತಿಪೀಠ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ: ದೇಶದ 75 ಕಡೆ ಡಿಜಿಟಲ್ ಬ್ಯಾಂಕಿಂಗ್ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ