ETV Bharat / bharat

ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ದು?: ಕೆಲವೇ ಕ್ಷಣಗಳಲ್ಲಿ ಘೋಷಣೆ ಸಾಧ್ಯತೆ - ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಚುನಾವಣೆ ಸಂಬಂಧ ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯೂ ಇದೆ.

presidential-elections
ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ದು
author img

By

Published : Jun 21, 2022, 8:23 PM IST

ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಪ್ರತಿಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಯನ್ನಾಗಿ ಯಶವಂತ್ ಸಿನ್ಹಾ ಅವರನ್ನು ಅಂತಿಮಗೊಳಿಸಿವೆ. ಈ ನಡುವೆ, ಮೇಲ್ನೋಟಕ್ಕೆ ಆಡಳಿತಾರೂಢ ಬಿಜೆಪಿ ಕಾದುನೋಡುವ ತಂತ್ರಕ್ಕೆ ಶರಣಾದಂತೆ ಕಂಡು ಬರುತ್ತಿದ್ದರೂ, ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನೇ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಯೋಚಿಸುತ್ತಿದೆಯೇ?. ಎನ್ನುವ ಗುಮಾನಿ ಹಬ್ಬಿದೆ.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವೆಂಕಯ್ಯ ನಾಯ್ದು ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ರಾಷ್ಟ್ರಪತಿ ಚುನಾವಣೆಯಂತಹ ನಿರ್ಣಾಯಕ ಸಮಯದಲ್ಲಿ ಪ್ರಮುಖ ನಾಯಕರು ಭೇಟಿ ಮಾಡಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಯ್ಡು ಅವರನ್ನು ಕೇಸರಿ ಪಡೆ ಪರಿಗಣಿಸುತ್ತಿದೆಯೇ ಎಂಬ ಸಂಶಯ ಹುಟ್ಟು ಹಾಕಿದೆ.

  • BJP's parliamentary board meeting underway at party headquarters in Delhi

    PM Narendra Modi, party president JP Nadda, Defence Minister Rajnath Singh, Union Home Minister Amit Shah, Union Minister Nitin Gadkari, and others present at the meeting pic.twitter.com/SeoQS9SOwB

    — ANI (@ANI) June 21, 2022 " class="align-text-top noRightClick twitterSection" data=" ">

ಕೆಲವೇ ಕ್ಷಣಗಳಲ್ಲಿ ಘೋಷಣೆ?: ರಾಷ್ಟ್ರಪತಿ ಚುನಾವಣೆ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸುತ್ತಿದ್ದು, ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯೂ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಅಮಿತ್ ಶಾ, ಗಡ್ಕರಿ ಸೇರಿ ಹಲವರು ಪಾಲ್ಗೊಂಡಿದ್ದಾರೆ.

ಪ್ರತಿಪಕ್ಷ ನಾಯಕರ ಸಭೆ: ಇತ್ತ, ಪ್ರತಿಪಕ್ಷಗಳ ನಾಯಕರು ಇಂದು ಮತ್ತೊಮ್ಮೆ ಸಭೆ ಸೇರಿ ತಮ್ಮ ಒಮ್ಮತದ ಅಭ್ಯರ್ಥಿಯನ್ನಾಗಿ ಯಶವಂತ್ ಸಿನ್ಹಾ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಎನ್​​ಸಿಪಿ ವರಿಷ್ಠ ಶರದ್​ ಪವಾರ್​ ಕರೆದ ಸಭೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಟಿಎಂಸಿ, ಸಮಾಜವಾದಿ ಪಕ್ಷ, ಸಿಪಿಐ, ಸಿಪಿಐಎಂ ಹಾಗೂ ಆರ್​ಜೆಡಿ ಪಕ್ಷದ ನಾಯಕರು ಚರ್ಚಿಸಿ ಬಿಜೆಪಿ ಮಾಜಿ ನಾಯಕರಾದ ಸಿನ್ಹಾ ಅವರಿಗೆ ಮಣೆ ಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಶಿವಸೇನೆ ತಿರುಮಂತ್ರ: 106 ಕಮಲ ಶಾಸಕರು ಗುಜರಾತ್​​ಗೆ ಶಿಫ್ಟ್​, ಅಖಾಡಕ್ಕಿಳಿದ ಅಮಿತ್​ ಶಾ-ನಡ್ಡಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.