ಕೊಟ್ಟಾಯಂ(ಕೇರಳ): 21 ವರ್ಷದ ದಲಿತ ಯುವತಿಯೋರ್ವಳ ಮೇಲೆ ದೇವಾಲಯದ ಅರ್ಚಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಮಾಡಿಕೊಳ್ಳುವ ಭರವಸೆ ನೀಡಿ, ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಕೇರಳದ ಕೊಟ್ಟಾಯಂನಲ್ಲಿ ಈ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಚಕನನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದೇವಾಲಯದ ಸಮೀಪದಲ್ಲೇ ಯುವತಿ ತನ್ನ ಪೋಷಕರೊಂದಿಗೆ ವಾಸವಾಗಿದ್ದಳು. ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದೀಗ ಮದುವೆ ಮಾಡಿಕೊಳ್ಳಲು ನಿರಾಕರಿಸುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆತನ ಬಂಧನ ಮಾಡುತ್ತಿದ್ದಂತೆ ಮದುವೆ ಮಾಡಿಕೊಳ್ಳಲು ಆತ ಒಪ್ಪಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಕಾರು ಅಪಘಾತ : ಆರು ಮಂದಿ ದುರ್ಮರಣ
ಬಾಲಕಿ ತಿಳಿಸಿರುವ ಪ್ರಕಾರ, ಅರ್ಚಕನ ಬಳಿ ತನ್ನ ನಗ್ನ ಚಿತ್ರ ಹಾಗೂ ವಿಡಿಯೋಗಳಿವೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಇದರ ಬಗ್ಗೆ ತನಿಖೆ ನಡೆಸುತ್ತಿದ್ದು, ಸದ್ಯ ಆತನನ್ನ ಪೊಲೀಸ್ ಕಸ್ಟಡಿಯಲ್ಲಿಟ್ಟಿದ್ದಾರೆ.