ನವದೆಹಲಿ: ದೇಶದಲ್ಲಿ ಕೋವಿಡ್ ಉಲ್ಬಣಿಸಿದೆ. ಪ್ರಸ್ತುತ ಸಂದರ್ಭದಲ್ಲಿ ವೈರಸ್ ತಂದಿಟ್ಟ ಪರಿಸ್ಥಿತಿ ಹಾಗೂ ವ್ಯಾಕ್ಸಿನೇಷನ್ ಸ್ಥಿತಿಗತಿ ಕುರಿತು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನ ಮಂತ್ರಿಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: India Covid Update: ಒಂದೇ ದಿನ 93 ಸಾವಿರ ಕೇಸ್ ಪತ್ತೆ; ಒಟ್ಟು 7.59 ಕೋಟಿ ಮಂದಿಗೆ ಲಸಿಕೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 93,249 ಹೊಸ ಸೋಂಕಿತರು ಪತ್ತೆಯಾಗಿದ್ದು, 513 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲೀಗ ಕೋವಿಡ್ ಪ್ರಕರಣಗಳ ಸಂಖ್ಯೆ 1,24,85,509 ಹಾಗೂ ಮೃತರ ಸಂಖ್ಯೆ 1,64,623ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದು, ಜನವರಿ 16 ರಿಂದ ಈವರೆಗೆ ಒಟ್ಟು 7,59,79,651 ಮಂದಿಗೆ ಲಸಿಕೆ ನೀಡಲಾಗಿದೆ.