ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸಚಿವರು, ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದೆ. ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ನಾಲ್ವರು ಸಚಿವರಿಗೆ ವಾರ್ ಡ್ಯೂಟಿ ನೀಡಿದ್ದಾರೆ.
ಉಕ್ರೇನ್‌ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲು ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಹಾಗೂ ಜನರಲ್ ವಿಕೆ ಸಿಂಗ್ ಅವರನ್ನು ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ ಕಳುಹಿಸಲು ನಿರ್ಧರಿಸಲಾಗಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಎನ್ಎಸ್ಎ ಅಜಿತ್ ದೋವಲ್ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದರು.