ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಪ್ರದೀಪ್ ಕುಮಾರ್ ಸಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣದಿಂದಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
1977ನೇ ಬ್ಯಾಚ್ನ ನಿವೃತ್ತಿ ಐಎಎಸ್ ಅಧಿಕಾರಿಯಾಗಿರುವ ಸಿನ್ಹಾ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಇವರನ್ನು 2019ರ ಆಗಸ್ಟ್ ತಿಂಗಳಲ್ಲಿ ಮೋದಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು.
ಇದನ್ನೂ ಓದಿ: ಕರ್ನಾಟಕ ಸೇರಿ ದೇಶದ 14 ವಿಧಾನಸಭೆ, 2 ಲೋಕಸಭೆ ಕ್ಷೇತ್ರಗಳ ಬೈಎಲೆಕ್ಷನ್ಗೆ ದಿನಾಂಕ ಪ್ರಕಟ
ಭಾರತದ 31ನೇ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ, ಅದಕ್ಕೂ ಮೊದಲು ಭಾರತದ ವಿದ್ಯುತ್ ಕಾರ್ಯದರ್ಶಿಯಾಗಿ ಇವರು ಸೇವೆ ಸಲ್ಲಿಸಿದ್ದರು.