ETV Bharat / bharat

ಪ್ರಿಯಾಂಕಾ ಗಾಂಧಿ ಪಕ್ಷದ ಅಧ್ಯಕ್ಷರಾಗಲಿ.. ಚಿಂತನಾ ಶಿಬಿರದಲ್ಲಿ ಪ್ರಸ್ತಾಪ - ಇದಕ್ಕೆ ಸಿಗುತ್ತಾ ಮನ್ನಣೆ?

ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಬೇಕು ಎಂಬ ಕೂಗು ರಾಜಸ್ಥಾನದಲ್ಲಿ ನಡೆಯುತ್ತಿರುವ ಚಿಂತನಾ ಶಿಬಿರದಲ್ಲಿ ಕೇಳಿ ಬಂದಿದೆ.

priyanka-gandhi
ಪ್ರಿಯಾಂಕಾ ಗಾಂಧಿ
author img

By

Published : May 14, 2022, 6:15 PM IST

ಉದಯ್​ಪುರ(ರಾಜಸ್ಥಾನ): ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಮೂರು ದಿನಗಳ ಚಿಂತನಾ ಶಿಬಿರದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಮಧ್ಯೆಯೇ ಇದೀಗ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಧ್ಯಕ್ಷೆಯಾಗಬೇಕು ಎಂಬ ಕೂಗು ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿರುವ ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಜನಪ್ರಿಯ ನಾಯಕಿಯಾಗಿದ್ದಾರೆ. ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನವನ್ನು ತುಂಬಲು 2 ವರ್ಷಗಳಿಂದ ರಾಹುಲ್ ಗಾಂಧಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಅವರು ಸಿದ್ಧರಿಲ್ಲದಿದ್ದರೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಓದಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತಿದ್ದ ಸುನಿಲ್ ಜಾಖರ್‌ ಕಾಂಗ್ರೆಸ್‌ಗೆ 'ಗುಡ್‌ಬೈ-ಗುಡ್‌ಲಕ್' ಎಂದು ಟ್ವೀಟ್‌..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.