ನವದೆಹಲಿ: ಉತ್ತರಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಪತ್ರಕರ್ತನ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಲಿಗಢದಿಂದ ಪ್ರತಾಪ್ಗಢದವರೆಗೆ ಕೆಲವರು ಮದ್ಯ ಮಾಫಿಯಾದಲ್ಲಿ ತೊಡಗಿದ್ದು, ಇದರಿಂದ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣಗಳನ್ನು ಬಯಲಿಗೆಳೆಯುತ್ತಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಆರೋಪಿಸಿದ್ದಾರೆ. ಜೂನ್ 13 ರ ತಡರಾತ್ರಿ ಪತ್ರಕರ್ತ ಸುಲಭ್ ಶ್ರೀವಾಸ್ತವ್ ಅವರ ಮೃತದೇಹ ಪ್ರತಾಪ್ಗಢದಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ವಾಲಿ ಠಾಣಾ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಕುತೂಹಲ ಕೆರಳಿಸಿದ ಮೋದಿ ಸಂಪುಟ ಕಸರತ್ತು: ಸುವೇಂದು, ಸಿಂಧಿಯಾಗೆ ಸಿಗುವುದೇ ಕೇಂದ್ರದಲ್ಲಿ ಸ್ಥಾನ?
ಇದಕ್ಕೂ ಮುನ್ನ ಪ್ರತಾಪ್ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿ, ಸುಲಭ್ ಶ್ರೀವಾಸ್ತವ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಬೈಕ್ನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ನರಳುತ್ತಿದ್ದಾಗ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೂ ಬದುಕುಳಿಯಲಿಲ್ಲ ಎಂದಿದ್ದರು.