ETV Bharat / bharat

ಹೆಚ್ಚಾದ ಕೋವಿಡ್​: ಉತ್ತರ ಪ್ರದೇಶ ಪ್ರಮುಖ ಕಾಂಗ್ರೆಸ್​​ ಮುಖಂಡರೊಂದಿಗೆ ಪ್ರಿಯಾಂಕಾ ಚರ್ಚೆ - ಪ್ರಿಯಾಂಕಾ ಗಾಂಧಿ ವಾದ್ರಾ

ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,510 ಕೋವಿಡ್​ ಪ್ರಕರಣ ದಾಖಲಾಗಿದ್ದು, ಲಖನೌದಲ್ಲೇ 5,382 ಸೋಂಕಿತರು ಪತ್ತೆಯಾಗಿದ್ದಾರೆ.

Priyanka Gandhi
Priyanka Gandhi
author img

By

Published : Apr 14, 2021, 8:22 PM IST

ನವದೆಹಲಿ: ಉತ್ತರ ಪ್ರದೇಶದಲ್ಲೂ ಎರಡನೇ ಹಂತದ ಕೋವಿಡ್​ ಅಬ್ಬರ ಹೆಚ್ಚಾಗಿದ್ದು, ಉತ್ತರ ಪ್ರದೇಶ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅಲ್ಲಿನ ಕಾಂಗ್ರೆಸ್​ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸುವ ಉದ್ದೇಶದಿಂದ ವರ್ಚುಯಲ್​ ಸಭೆ ನಡೆಸಿದ ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್​​ ಮುಖಂಡರೊಂದಿಗೆ ಪ್ರಿಯಾಂಕಾ ಚರ್ಚೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿ ಕೆಲ ಅಧಿಕಾರಿಗಳಿಗೆ ಕೋವಿಡ್​ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಹೋಂ ಐಸೋಲೇಷನ್​​ಗೊಳಗಾಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೂ ಇದೀಗ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಪ್ರಿಯಾಂಕಾ ವಾದ್ರಾ ತುರ್ತು ಸಭೆ ನಡೆಸಿದರು.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿಗಿಲ್ಲ ಬೆಲೆ.. ಗಂಗಾ ಆರತಿಯಲ್ಲಿ ಸಾವಿರಾರು ಭಕ್ತರು ಭಾಗಿ!

ಕೊರೊನಾ ವೈರಸ್​ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್​​ ಅಲ್ಲಿನ ಜನರಿಗೆ ಸಹಾಯ ಮಾಡುವಂತೆ ಪ್ರಿಯಾಂಕಾ ಕರೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಕೊರೊನಾ ಪರಿಸ್ಥಿತಿ ಈಗಾಗಲೇ ಕೈತಪ್ಪಿ ಹೋಗಿದೆ. ಇದಕ್ಕೆ ಮುಖ್ಯ ಕಾರಣ ಅಲ್ಲಿನ ರಾಜ್ಯ ಸರ್ಕಾರವಾಗಿದೆ ಎಂದಿರುವ ಪ್ರಿಯಾಂಕಾ, ಖಾಸಗಿ ಲ್ಯಾಬ್​ಗಳಲ್ಲಿ ಕೋವಿಡ್ ಟೆಸ್ಟ್​​ ನಡೆಸಲು ಅನುಮತಿ ನೀಡದಿರುವುದು ಇದಕ್ಕೆಲ್ಲ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಕೊರೊನಾ ಸೋಂಕಿಗೊಳಗಾಗಿರುವ ಯೋಗಿ ಆದಿತ್ಯನಾಥ್​ ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಪ್ರಿಯಾಂಕಾ ವಾದ್ರಾ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.