ETV Bharat / bharat

ಯುಪಿ ವಿಧಾನಸಭೆ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ಪಕ್ಷದ ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆ ಇದೆ.

priyanka gandhi may be congress cm candidate for up elections
ಮುಂಬರುವ ಯುಪಿ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಸಾಧ್ಯತೆ - ಕೈ ನಾಯಕರು
author img

By

Published : Sep 13, 2021, 5:58 PM IST

ನವದೆಹಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿವೆ.

ಈಗಾಗಲೇ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾವಣೆ ಗೆಲುವಿಗೆ ತಮ್ಮದೇ ಆದ ತಂತ್ರಗಾರಿಕೆಯನ್ನು ಆರಂಭಿಸಿವೆ. ಈ ನಡುವೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 2022 ರ ಯುಪಿ ವಿಧಾನಸಭಾ ಚುನಾವಣೆಗೆ ಹೋಗುತ್ತದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಣಕ್ಕೆ ಇಳಿಯಲಿದೆ. ಅವರು ನಮ್ಮ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಆಕೆಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಗಳೂ ಇವೆ. ಆದರೂ ಈ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಸಲ್ಮಾನ್ ಖುರ್ಷಿದ್ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚನಾವಣೆ ಕಸರತ್ತು ; ಲಖನೌನಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ

ಯುಪಿ ಚುನಾವಣೆಯಲ್ಲಿ ಕಾಂಗ್ರೆಸ್‌ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದ ಎಲ್ಲಾ ವಿಧಾನಸಭಾ ಸ್ಥಾನಗಳಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಯಾರಾದರೂ ನಮ್ಮೊಂದಿಗೆ ಕೈಜೋಡಿಸಲು ಸಿದ್ಧರಿದ್ದರೆ, ಅವರನ್ನು ಆತ್ಮೀಯವಾಗಿ ಆಹ್ವಾನಿಸಲಾಗುತ್ತದೆ ಎಂದು ಖುರ್ಷಿದ್‌ ಮಾಹಿತಿ ನೀಡಿದರು.

ಉತ್ತರಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 2017 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ರಾಜ್ಯದಲ್ಲಿ 403 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಸಮಾಜವಾದಿ ಪಕ್ಷ 47, ಬಹುಜನ ಸಮಾಜ ಪಕ್ಷ 19 ಹಾಗೂ ಕಾಂಗ್ರೆಸ್ ಕೇವಲ 7 ಸ್ಥಾನಗಳಿಗೆ ತೃಪ್ತಿಪಟ್ಟಿಕೊಂಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.