ETV Bharat / bharat

ಅಪಘಾತದಲ್ಲಿ ಮೃತಪಟ್ಟ ಪಕ್ಷದ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ಪ್ರಿಯಾಂಕಾ ಗಾಂಧಿ - ಉತ್ತರಪ್ರದೇಶದ ಕಾಂಗ್ರೆಸ್​​ ಕಾರ್ಯಕರ್ತ ಅಪಘಾತದಲ್ಲಿ ಸಾವು

ಎಐಸಿಸಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ
Priyanka Gandhi
author img

By

Published : Jan 25, 2021, 6:47 AM IST

ನವದೆಹಲಿ: ಉತ್ತರಪ್ರದೇಶದ ಎಐಸಿಸಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ.

ಗಾಜಿಪುರ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತ ತ್ರಿಭುವನ್​ ಸಿಂಗ್​​ ಎಂಬುವವರು ಬ್ಲಾಕ್ ಅಧ್ಯಕ್ಷರೊಂದಿಗೆ ತಮ್ಮ ಪ್ರದೇಶದಲ್ಲಿ ನಡೆಯುತ್ತಿದ್ದ ನ್ಯಾಯ ಪಂಚಾಯತ್ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಈ ವೇಳೆ, ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಈ ಕುರಿತು ಮಾಹಿತಿ ಪಡೆದ ಪ್ರಿಯಾಂಕಾ ಗಾಂಧಿ ಮೃತ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.

ಇನ್ನು ಕಾರ್ಯಕರ್ತನ ಕುಟುಂಬದ ಆರ್ಥಿಕ ಪರಿಸ್ಥಿತಿ ಮನಗಂಡ ಪ್ರಿಯಾಂಕಾ ಗಾಂಧಿ, ಪಕ್ಷದ ಕಾರ್ಯದರ್ಶಿ ಬಾಜಿರಾವ್ ಖಡೆ ಅವರ ಮೂಲಕ ಪಕ್ಷದಿಂದ ಸುಮಾರು 2 ಲಕ್ಷ ರೂ.ಗಳನ್ನು ಮೃತ ಕಾರ್ಯಕರ್ತನ ಕುಟುಂಬಕ್ಕೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗೌರವಾನ್ವಿತ ತ್ರಿಭುವನ್ ಸಿಂಗ್ಜಿ ಅವರ ಕುಟುಂಬಕ್ಕೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪ್ರಿಯಾಂಕಾ ಗಾಂಧಿ ಪರವಾಗಿ ಯುಪಿ ಕಾಂಗ್ರೆಸ್​​ನಿಂದ 2 ಲಕ್ಷ ರೂ.ಗಳ ಚೆಕ್ ನೀಡಿದೆ ಎಂದು ಬಾಜಿರಾವ್ ಖಡೆ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.