ಪ್ರಯಾಗರಾಜ್ (ಉತ್ತರ ಪ್ರದೇಶ): ಮೌನಿ ಅಮಾವಾಸ್ಯೆ ಪ್ರಯುಕ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿ ಸೇರುತ್ತವೆ. ಇಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಿಯಾಂಕಾ, ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮೌನಿ ಅಮಾವಾಸ್ಯೆ: ಗಂಗಾ ನದಿಯಲ್ಲಿ ಭಕ್ತರಿಂದ ಪವಿತ್ರ ಸ್ನಾನ
ಇದಕ್ಕೂ ಮುನ್ನ ಪ್ರಿಯಾಂಕಾ, ಪ್ರಯಾಗರಾಜ್‌ಗೆ ಬಂದು ಪಂಡಿತ್ ಜವಾಹರಲಾಲ್ ನೆಹರೂ ಕುಟುಂಬದ ಪೂರ್ವಜರ ಮನೆಯಾದ ಆನಂದ್ ಭವನಕ್ಕೆ ಭೇಟಿ ನೀಡಿದ್ದರು. ನೆಹರೂ ಅವರ ಚಿತಾಭಸ್ಮವನ್ನು ಗಂಗಾ ನದಿಯಲ್ಲಿ ಮುಳುಗಿಸುವ ಮೊದಲು ಅದನ್ನು ಇಟ್ಟುಕೊಂಡಿದ್ದ ಸ್ಥಳಕ್ಕೆ ನಮಿಸಿದರು.