ETV Bharat / bharat

ಯುಪಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ: ಪ್ರಿಯಾಂಕಾ ಗಾಂಧಿ - ಕಾಂಗ್ರೆಸ್‌

ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ ಫೋನ್‌ ಹಾಗೂ ವಿದ್ಯುತ್‌ ಚಾಲಿತ ಸ್ಕೂಟಿ ನೀಡುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

Priyanka promises smartphones, scooty to girls in UP
ಯುಪಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ ನೀಡ್ತೇವೆ - ಪ್ರಿಯಾಂಕಾ ಗಾಂಧಿ
author img

By

Published : Oct 21, 2021, 1:18 PM IST

ನವದೆಹಲಿ: ಉತ್ತರ ಪ್ರದೇಶದಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲೇ ಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್‌ ಭರವಸೆಗಳ ಮಹಾಪೂರವನ್ನೇ ಹರಿಸುತ್ತಿದೆ. ಮುಂದಿನ ಯುಪಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವತಿಯರಿಗೆ ಸ್ಮಾರ್ಟ್‌ ಫೋನ್‌ ಹಾಗೂ ಎಲೆಕ್ಟ್ರಾನಿಕ್‌ ಸ್ಕೂಟಿ ನೀಡುವುದಾಗಿ ಆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.

ಈ ಬಗ್ಗೆ ಇಂದು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ನಾನು ಕೆಲವು ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದೇನೆ, ಅಧ್ಯಯನ ಮಾಡಲು ಮತ್ತು ಭದ್ರತೆಗಾಗಿ ಸ್ಮಾರ್ಟ್ ಫೋನ್ ಬೇಕು ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಗೆದ್ದರೆ ಇಂಟರ್‌ಮೀಡಿಯಟ್‌ ಉತ್ತೀರ್ಣರಾದವರಿಗೆ ಸ್ಮಾರ್ಟ್‌ ಫೋನ್‌ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್‌ ಸ್ಕೂಟಿ ನೀಡುವ ನಿರ್ಧಾರವನ್ನು ಕೈಗೊಂಡಿದ್ದೇವೆ. ಪ್ರಣಾಳಿಕೆ ಸಮಿತಿ ಇದಕ್ಕೆ ಒಪ್ಪಿಗೆ ನೀಡಿರುವುದು ನನಗೆ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

  • कल मैं कुछ छात्राओं से मिली। उन्होंने बताया कि उन्हें पढ़ने व सुरक्षा के लिए स्मार्टफोन की जरूरत है।

    मुझे खुशी है कि घोषणा समिति की सहमति से आज UP कांग्रेस ने निर्णय लिया है कि सरकार बनने पर इंटर पास लड़कियों को स्मार्टफोन और स्नातक लड़कियों को इलेक्ट्रानिक स्कूटी दी जाएगी। pic.twitter.com/hoW5DfhS3f

    — Priyanka Gandhi Vadra (@priyankagandhi) October 21, 2021 " class="align-text-top noRightClick twitterSection" data=" ">

ಕಳೆದ ಕೆಲ ದಿನಗಳ ಹಿಂದಷ್ಟೇ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಶೇ.40 ರಷ್ಟು ಮಹಿಳೆಯರಿಗೆ ಟಿಕೆಟ್ ಘೋಷಿಸಿದ್ದರು. ಇದೇ ವೇಳೆ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಯಸುವ ಎಲ್ಲಾ ಮಹಿಳೆಯರು, ಮುಂದೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಾಗತವಿದೆ ಎಂದಿದ್ದರು. ಸ್ಪರ್ಧೆ ಬಯಸುವ ಆಸಕ್ತ ಮಹಿಳೆಯರು ನವೆಂಬರ್ 15 ರವರೆಗೆ ಅರ್ಜಿಯನ್ನು ನೀಡಬಹುದು ಎಂದು ಮಾಧ್ಯಮಗೋಷ್ಠಿಯಲ್ಲಿ ಘೋಷಿಸಿದ್ದರು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ದೇಶದ ಮಗಳು ಹೇಳುತ್ತಾರೆ - ನಮ್ಮ ಕಠಿಣ ಪರಿಶ್ರಮದಿಂದ, ಶಿಕ್ಷಣದ ಬಲದಿಂದ, ಸರಿಯಾದ ಮೀಸಲಾತಿಯೊಂದಿಗೆ ನಾನು ಮುಂದುವರಿಯಬಹುದು ಎಂದು ಹೇಳಿದ್ದಾರೆ.

1989ರಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರದಿಂದ ಹೊರಗುಳಿದಿದೆ. ಮುಂಬರುವ ಚುನಾವಣೆಯಲ್ಲೂ ಬಿಜೆಪಿ ಮತ್ತು ಎಸ್ಪಿ ನಡುವೆ ನೇರ ಸ್ಪರ್ಧೆ ಎಂದು ಹೇಳಲಾಗುತ್ತಿದ್ದು, ಇದರ ನಡುವೆ ಕಾಂಗ್ರೆಸ್‌ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಮಹಿಳೆಯರಿಗೆ ಹಲವು ಭರವಸೆಗಳನ್ನು ನೀಡುವ ಮೂಲಕ ಜನರನ್ನು ತನ್ನತ್ತ ಸಳೆಯಲು ಕಾಂಗ್ರೆಸ್‌ ಯತ್ನಿಸುತ್ತಿದೆ.

  • देश की बेटी कहती है-
    अपनी मेहनत से
    शिक्षा की ताक़त से
    सही आरक्षण से
    मैं आगे-आगे बढ़ सकती हूँ#लड़की_हूँ_लड़_सकती_हूँ!

    यूपी सिर्फ़ शुरुआत है।

    — Rahul Gandhi (@RahulGandhi) October 21, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್​.. ಪ್ರಿಯಾಂಕಾ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.