ETV Bharat / bharat

ಕೇರಳ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪ್ರಮುಖ ಅಭ್ಯರ್ಥಿಗಳು

ಮತ ಚಲಾಯಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚುನಾವಣಾ ಅಭ್ಯರ್ಥಿಗಳು ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

election
election
author img

By

Published : Apr 6, 2021, 8:03 PM IST

ತಿರುವನಂತಪುರಂ (ಕೇರಳ): ಕೇರಳ ವಿಧಾನಸಭಾ ಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಸಾಮಾನ್ಯರು ಸೇರಿದಂತೆ ಅಭ್ಯರ್ಥಿಗಳು ಮತ ಚಲಾಯಿಸಿದರು. ಎಲ್ಲ ಪಕ್ಷಗಳ ಅನೇಕ ಪ್ರಮುಖ ಅಭ್ಯರ್ಥಿಗಳು ತಮ್ಮ ಕುಟುಂಬದವರೊಡನೆ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದರು.

ಮತ ಚಲಾಯಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಮತ್ತು ಸಿಪಿಎಂ ಮುಖಂಡ ಪಿಣರಾಯಿ ವಿಜಯನ್, ಎಲ್‌ಡಿಎಫ್ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯುಡಿಎಫ್​ ಅಭೂತಪೂರ್ವ ಜಯ ಗಳಿಸಲಿದೆ ಎಂದು ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಇ.ಶ್ರೀಧರನ್ ಬಿಜೆಪಿ ಅದ್ಭುತ ಗೆಲುವು ಸಾಧಿಸಲಿದೆ ಮತ್ತು ಪಾಲಕ್ಕಾಡ್‌ನಲ್ಲಿ ಬಹುಮತದೊಂದಿಗೆ ಜಯಗಳಿಸಲಿದೆ ಎಂದರು. ಸತತ ಎರಡನೇ ಅವಧಿ ಬಾರಿಗೆ ಅಧಿಕಾರಕ್ಕೇರುವುದು ಖಚಿತ ಎಂದು ಎಲ್‌ಡಿಎಫ್ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಕೊನ್ನಿ ಹಾಘೂ ಮಂಜೇಶ್ವರಂ ಅಭ್ಯರ್ಥಿ ಕೆ ಸುಧಾಕರನ್ ಅವರು ಈ ಚುನಾವಣೆಯಲ್ಲಿ ಕೇರಳದಲ್ಲಿ ಎನ್‌ಡಿಎ ಅದ್ಭುತ ಪ್ರಗತಿ ಕಾಣಲಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.