ಜಮ್ಮು ಮತ್ತು ಕಾಶ್ಮೀರ : ರಾಜಧಾನಿ ಜಮ್ಮುವಿನಲ್ಲಿ ನಿರಾಶ್ರಿತ ಕಾಶ್ಮೀರಿ ಪಂಡಿತರು ಪುನರ್ವಸತಿ ಕಲ್ಪಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 1989ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಬಂದೂಕು ಹಿಡಿದು ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದಾಗ ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ವಲಸೆ ಬಂದಿದ್ದರು.
ಸರ್ಕಾರವು ಈ ಪಂಡಿತರಿಗೆ ಉಧಂಪುರ ಮತ್ತು ಜಮ್ಮುವಿನಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಅದಲ್ಲದೇ ಇತರ ಅನೇಕ ಪಂಡಿತರು ದೇಶದ ವಿವಿಧ ನಗರಗಳಿಗೆ ವಲಸೆ ಹೋಗಿದ್ದರು.
ಒಂದೆಡೆ ಪಂಡಿತರ ಪುನರ್ವಸತಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದ್ದರೆ, ಇನ್ನೊಂದೆಡೆ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಡಿತರು ಆರೋಪಿಸಿದ್ದಾರೆ.
ಇದನ್ನೂ ಓದಿ : ಯುವತಿ ಮೇಲೆ ಅತ್ಯಾಚಾರ ಯತ್ನ: ಕೊನೆಗೆ ಸಜೀವ ದಹನ... ಪ್ರಕರಣದ ಬೆನ್ನಟ್ಟಿದ ಪೊಲೀಸರು