ಗಾಜಿಯಾಬಾದ್ (ಉತ್ತರ ಪ್ರದೇಶ): ರೊಟೇಷನ್ ಆಧಾರದ ಮೇಲೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಪ್ರತಿಭಟನಾ ನಿರತ ರೈತರು ಈಗ ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲು ನಿರ್ಧರಿಸಿದ್ದಾರೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೊಟೇಷನ್ ಆಧಾರದಲ್ಲಿ ಹನ್ನೊಂದು ರೈತರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು.
ಏರುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ಉಪವಾಸ ಸತ್ಯಾಗ್ರಹವನ್ನು ಮುಂದೂಡಲು ನಾವು ನಿರ್ಧರಿಸಿದ್ದೇವೆ. ರೈತರು ಉಪವಾಸ ಸತ್ಯಾಗ್ರಹ ಮುಂದುವರಿಸಿದರೆ ನಿರ್ಜಲೀಕರಣದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಮತ್ತು ಚಳವಳಿಗಾರರು ಕೊರೊನಾ ವೈರಸ್‌ಗೆ ತುತ್ತಾಗುವ ಅಪಾಯವಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಪ್ರಮುಖ ಪ್ರತಿಭಟನಾ ಸ್ಥಳವಾದ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿನ ಜನರು ಕೃಷಿ ಕಾನೂನುಗಳ ವಿರುದ್ಧ ಐದು ತಿಂಗಳಿನಿಂದ ನಡೆಸುತ್ತಿದ್ದಾರೆ. ಇದೀಗ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದ್ದು, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.