ಪುದುಚೇರಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸೋಂ ಜತೆಗೆ ಪುದುಚೇರಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ.
ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಪಾರ ಪ್ರಮಾಣದಲ್ಲಿ ನಗದು ಹರಿದಾಡುತ್ತಿದೆ. ಪುದುಚೇರಿಯಲ್ಲಿ ಚುನಾವಣಾಧಿಕಾರಿಗಳು 2 ಕೋಟಿ ರೂ. ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಜತೆಗೆ 30 ಸಾವಿರ ಸೆಟ್ ಟಾಪ್ ಬಾಕ್ಸ್ ಕೂಡ ಜಪ್ತಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
500,200 ಹಾಗೂ 100 ರೂ. ನೋಟುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ರಾತ್ರಿ ವೇಳೆ ವಾಹನದಲ್ಲಿ ರವಾನೆ ಮಾಡುತ್ತಿದ್ದ ವೇಳೆ ಪರಿಶೀಲನೆ ನಡೆಸಿದಾಗ ಹಣ ಇರುವುದು ಪತ್ತೆಯಾಗಿದೆ ಎಂದು ಚುನಾವಣಾಧಿಕಾರಿ ಸುಭೀರ್ ಸಿಂಗ್ ತಿಳಿಸಿದ್ದಾರೆ. ಇದರ ಜತೆಗೆ 30 ಸಾವಿರ ಸೆಟ್ ಟಾಪ್ ಬಾಕ್ಸ್ ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಸ್ಸೋಂ ಚುನಾವಣೆ: 53 ಲಕ್ಷ ನಗದು, 3.93 ಕೋಟಿ ರೂ. ಮೌಲ್ಯದ ಮದ್ಯ ವಶ
ಉಳಿದಂತೆ 3,600 ಲೀಟರ್ ಮದ್ಯ ಕೂಡ ವಶಕ್ಕೆ ಪಡೆದುಕೊಳ್ಳುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆಂದು ಅವರು ತಿಳಿಸಿದ್ದಾರೆ.