ETV Bharat / bharat

ಪಂಜಾಬ್, ಉತ್ತರಪ್ರದೇಶದಲ್ಲಿ ಚುನಾವಣೆ: ಎಲ್ಲೆಲ್ಲಿ, ಎಷ್ಟು ಮತದಾನ? - ಪಂಜಾಬ್ ಹಾಗೂ ಉತ್ತರಪ್ರದೇಶದಲ್ಲಿ ಚುನಾವಣೆ

ಇಂದು ಪಂಜಾಬ್​ ಹಾಗೂ ಉತ್ತರಪ್ರದೇಶದಲ್ಲಿ ಮತದಾನ ನಡೆಯಿತು. ಸಂಜೆ ಆರು ಗಂಟೆವರೆಗೆ ಪಂಜಾಬ್​ನಲ್ಲಿ 64.3% ರಷ್ಟು ಮತದಾನವಾಗಿದ್ದರೆ ಉತ್ತರ ಪ್ರದೇಶದಲ್ಲಿ 60.1 ರಷ್ಟು ಮತದಾನವಾಗಿದೆ.

ಪಂಜಾಬ್ ಹಾಗೂ ಉತ್ತರಪ್ರದೇಶದಲ್ಲಿ ಚುನಾವಣೆ
ಪಂಜಾಬ್ ಹಾಗೂ ಉತ್ತರಪ್ರದೇಶದಲ್ಲಿ ಚುನಾವಣೆ
author img

By

Published : Feb 20, 2022, 8:58 PM IST

ಹೈದರಾಬಾದ್​: ಪಂಜಾಬ್ ಹಾಗೂ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಈ ವೇಳೆ ಪಂಜಾಬ್​ನಲ್ಲಿ 64.3% ಮತದಾರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಬಿಗಿ ಭದ್ರತೆಯ ನಡುವೆ ಪಂಜಾಬ್‌ನ ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಕ್ಕೆ ಮುಗಿದಿದೆ. ರಾಜ್ಯ ಪೊಲೀಸ್ ಸಿಬ್ಬಂದಿಯಲ್ಲದೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಒಟ್ಟು 7000 ವಿವಿಧ ವಿಭಾಗಗಳ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಲಾಗಿತ್ತು. 93 ಮಹಿಳೆಯರು ಮತ್ತು ಇಬ್ಬರು ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಇದನ್ನೂ ಓದಿ: 2004ರ ನಕಲಿ ಎನ್‌ಕೌಂಟರ್ ಪ್ರಕರಣ: 18 ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್​ ಆದೇಶ

ಉತ್ತರ ಪ್ರದೇಶದ ಒಟ್ಟು 59 ವಿಧಾನಸಭಾ ಕ್ಷೇತ್ರಗಳಿಗೆ ಮೂರನೇ ಹಂತದ ಮತದಾನ ಜರುಗಿತು. ಇದುವರೆಗಿನ ಚುನಾವಣೆಗಳಲ್ಲಿ ಇದು ಅತ್ಯಂತ ನಿರ್ಣಾಯಕ ಸುತ್ತಾಗಿದೆ. ಇಂದು ಶೇ 60.1 ರಷ್ಟು ಮತದಾನ ಆಗಿದೆ.

ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕನ್ನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್‌ಪುರ್, ಹಮೀರ್‌ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ವೋಟಿಂಗ್​ ಆಗಿದ್ದು ಈ 16 ಜಿಲ್ಲೆಗಳಲ್ಲಿನ ಕ್ಷೇತ್ರಗಳು ಉತ್ತರಪ್ರದೇಶದ ನಿರ್ಣಾಯಕ ಕ್ಷೇತ್ರಗಳಾಗಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಎಸ್ಪಿ ಸಿಂಗ್ ಬಘೇಲ್ ವಿರುದ್ಧ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. ಮೂರನೇ ಹಂತದಲ್ಲಿ ಒಟ್ಟು 627 ಅಭ್ಯರ್ಥಿಗಳು ಕಣದಲ್ಲಿದ್ದರೆ, 20 ಮಿಲಿಯನ್ ಜನರು ಮತ ಚಲಾಯಿಸಲು ಅರ್ಹರಾಗಿದ್ದರು. ಮಾರ್ಚ್ 10 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.