ಚಂಡೀಗಢ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ವಿರೋಧ ಪಕ್ಷಗಳು ಯೋಜನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇಂದ್ರ ಸರ್ಕಾರ ಅಗ್ನಿಪಥ್ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪಂಜಾಬ್ ಸಿಎಂ ಟ್ವೀಟ್ ಮಾಡಿ, ಈ ಯೋಜನೆಯಿಂದ ದೇಶದ ಯುವಕರು ಮೋಸ ಹೋಗಿದ್ದಾರೆ. ದೇಶಾದ್ಯಂತ ಯುವಕರ ಕೋಪಕ್ಕೆ ಕಾರಣವಾದ ಅಗ್ನಿಪಥ್ ಅವಿವೇಕದ ನಿರ್ಧಾರವಾಗಿದೆ. ಕೂಡಲೇ ಈ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಅಗ್ನಿಪಥ್ ಯೋಜನೆಯ ವಿರುದ್ಧ ಹರಿಯಾಣ ಮತ್ತು ಬಿಹಾರದಲ್ಲಿ ಹೆಚ್ಚಿನ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತೀಚಿನ ಬೆಳವಣಿಗೆಯಲ್ಲಿ ದಕ್ಷಿಣ ಭಾರತಕ್ಕೂ ಹೋರಾಟದ ಕಿಚ್ಚು ಹರಡುತ್ತಿದೆ.
ಇದನ್ನೂ ಓದಿ: ರಾಜೀವ್ ಹತ್ಯೆ ಪ್ರಕರಣ: ನಳಿನಿ, ರವಿಚಂದ್ರನ್ ಬಿಡುಗಡೆ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್