ETV Bharat / bharat

ಪಟಿಯಾಲದಲ್ಲಿ ಎರಡು ಗುಂಪುಗಳ ಘರ್ಷಣೆ; ಪರಿಸ್ಥಿತಿ ಹತೋಟಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌

author img

By

Published : Apr 29, 2022, 3:39 PM IST

Updated : Apr 29, 2022, 10:11 PM IST

ಪಟಿಯಾಲದಲ್ಲಿರುವ ಕಾಳಿ ದೇವಿ ಮಂದಿರದ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಬಿಗಿಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

Punjab Clashes break
Punjab Clashes break

ಪಟಿಯಾಲ್​(ಪಂಜಾಬ್​): ಪಟಿಯಾಲದಲ್ಲಿರುವ ಕಾಳಿ ಮಾತಾ ದೇವಸ್ಥಾನದ ಬಳಿ ಶಿವಸೇನೆ ಕಾರ್ಯಕರ್ತರು ಖಲಿಸ್ತಾನ್‌ ವಿರೋಧಿ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ, ಖಡ್ಗಗಳನ್ನು ಝಳಪಿಸಿರುವುದು ಸೇರಿದಂತೆ ಗುಂಪು ಘರ್ಷಣೆ ನಡೆದಿದೆ. ಹೀಗಾಗಿ, ಎರಡೂ ಕಡೆಯ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಸದ್ಯ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ಪ್ರಮಾಣದ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಪಟಿಯಾಲದಲ್ಲಿ ಎರಡು ಗುಂಪುಗಳ ಘರ್ಷಣೆ

ವಿವರ: ಪಟಿಯಾಲಾದ ಕಾಳಿ ದೇವಿ ಮಂದಿರ ಬಳಿ ಶಿವಸೇನೆ ಖಲಿಸ್ತಾನ್‌ ವಿರೋಧಿ ಮೆರವಣಿಗೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಇನ್ನೊಂದು ಗುಂಪು ಕಲ್ಲು ತೂರಾಟ, ಖಡ್ಗಗಳನ್ನು ಝಳಪಿಸಿದೆ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳೂ ವೈರಲ್ ಆಗಿವೆ. ಘರ್ಷಣೆ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಪ್ರಮಾಣದ ಪೊಲೀಸ್ ಪಡೆಯನ್ನು ಕರೆಸಿಕೊಳ್ಳಲಾಗಿದ್ದು ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ ಎಂದು ತಿಳಿದುಬಂದಿದೆ.

  • The incident of clashes in Patiala are deeply unfortunate. I spoke with the DGP, peace has been restored in the area. We are closely monitoring the situation and will not let anyone create disturbance in the State. Punjab’s peace and harmony is of utmost importance.

    — Bhagwant Mann (@BhagwantMann) April 29, 2022 " class="align-text-top noRightClick twitterSection" data="

The incident of clashes in Patiala are deeply unfortunate. I spoke with the DGP, peace has been restored in the area. We are closely monitoring the situation and will not let anyone create disturbance in the State. Punjab’s peace and harmony is of utmost importance.

— Bhagwant Mann (@BhagwantMann) April 29, 2022 ">

ಶಿವಸೇನೆ ಮೆರವಣಿಗೆ ನಡೆಸಲು ಯಾವುದೇ ರೀತಿಯ ಅನುಮತಿ ಪಡೆದುಕೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿ, 'ಪಟಿಯಾಲ​​ದಲ್ಲಿ ನಡೆದಿರುವ ಘರ್ಷಣೆ ಅತ್ಯಂತ ದುರದೃಷ್ಟಕರ. ಈಗಾಗಲೇ ಡಿಜಿಪಿ ಜೊತೆ ಮಾತನಾಡಿದ್ದು, ಘರ್ಷಣೆ ನಡೆದ ಸ್ಥಳದಲ್ಲಿ ಶಾಂತಿ ನೆಲೆಸಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ' ಎಂದು ತಿಳಿಸಿದ್ದಾರೆ.

ಪಟಿಯಾಲಾದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 7ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ.

ಪಟಿಯಾಲ್​(ಪಂಜಾಬ್​): ಪಟಿಯಾಲದಲ್ಲಿರುವ ಕಾಳಿ ಮಾತಾ ದೇವಸ್ಥಾನದ ಬಳಿ ಶಿವಸೇನೆ ಕಾರ್ಯಕರ್ತರು ಖಲಿಸ್ತಾನ್‌ ವಿರೋಧಿ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ, ಖಡ್ಗಗಳನ್ನು ಝಳಪಿಸಿರುವುದು ಸೇರಿದಂತೆ ಗುಂಪು ಘರ್ಷಣೆ ನಡೆದಿದೆ. ಹೀಗಾಗಿ, ಎರಡೂ ಕಡೆಯ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಸದ್ಯ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ಪ್ರಮಾಣದ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಪಟಿಯಾಲದಲ್ಲಿ ಎರಡು ಗುಂಪುಗಳ ಘರ್ಷಣೆ

ವಿವರ: ಪಟಿಯಾಲಾದ ಕಾಳಿ ದೇವಿ ಮಂದಿರ ಬಳಿ ಶಿವಸೇನೆ ಖಲಿಸ್ತಾನ್‌ ವಿರೋಧಿ ಮೆರವಣಿಗೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಇನ್ನೊಂದು ಗುಂಪು ಕಲ್ಲು ತೂರಾಟ, ಖಡ್ಗಗಳನ್ನು ಝಳಪಿಸಿದೆ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳೂ ವೈರಲ್ ಆಗಿವೆ. ಘರ್ಷಣೆ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಪ್ರಮಾಣದ ಪೊಲೀಸ್ ಪಡೆಯನ್ನು ಕರೆಸಿಕೊಳ್ಳಲಾಗಿದ್ದು ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ ಎಂದು ತಿಳಿದುಬಂದಿದೆ.

  • The incident of clashes in Patiala are deeply unfortunate. I spoke with the DGP, peace has been restored in the area. We are closely monitoring the situation and will not let anyone create disturbance in the State. Punjab’s peace and harmony is of utmost importance.

    — Bhagwant Mann (@BhagwantMann) April 29, 2022 " class="align-text-top noRightClick twitterSection" data=" ">

ಶಿವಸೇನೆ ಮೆರವಣಿಗೆ ನಡೆಸಲು ಯಾವುದೇ ರೀತಿಯ ಅನುಮತಿ ಪಡೆದುಕೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿ, 'ಪಟಿಯಾಲ​​ದಲ್ಲಿ ನಡೆದಿರುವ ಘರ್ಷಣೆ ಅತ್ಯಂತ ದುರದೃಷ್ಟಕರ. ಈಗಾಗಲೇ ಡಿಜಿಪಿ ಜೊತೆ ಮಾತನಾಡಿದ್ದು, ಘರ್ಷಣೆ ನಡೆದ ಸ್ಥಳದಲ್ಲಿ ಶಾಂತಿ ನೆಲೆಸಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ' ಎಂದು ತಿಳಿಸಿದ್ದಾರೆ.

ಪಟಿಯಾಲಾದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 7ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ.

Last Updated : Apr 29, 2022, 10:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.