ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಈ ವೇಳೆ ಕೆಲಹೊತ್ತು ಮಾತುಕತೆ ನಡೆಸಿರುವ ಅವರು, ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ವಿವರಿಸಿ, ಆರ್ಥಿಕ ಸ್ಥಿತಿ ಸುಧಾರಿಸಲು 50,000 ಕೋಟಿ ರೂ. ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಭಗವಂತ್ ಮಾನ್, ರಾಷ್ಟ್ರೀಯ ಭದ್ರತೆ ಕಾಪಾಡಿಕೊಳ್ಳಲು ನಮಗೆ ಕೇಂದ್ರದ ಬೆಂಬಲ ಬೇಕು. ಪಂಜಾಬ್ನಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಲ್ಲಿನ ಪರಿಸ್ಥಿತಿ ಸುಧಾರಿಸಲು ಮುಂದಿನ ಎರಡು ವರ್ಷಗಳವರೆಗೆ ಪ್ರತಿ ವರ್ಷ 50,000 ಸಾವಿರ ಕೋಟಿ ರೂ. ಪ್ಯಾಕೇಜ್ಗೆ ಬೇಡಿಕೆ ಇಟ್ಟಿದ್ದೇವೆ ಎಂದರು. ಇದರ ಜೊತೆಗೆ ಗಡಿ ಸಮಸ್ಯೆ, ಡ್ರಗ್ಸ್ ಸಾಗಾಣಿಕೆ ಸೇರಿದಂತೆ ಕೆಲ ಮಹತ್ವದ ವಿಷಯಗಳ ಕುರಿತಾಗಿಯೂ ಪ್ರಧಾನಿ ಹಾಗೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
-
ਪੰਜਾਬ ਦੇ ਮੁੱਖ ਮੰਤਰੀ ਦਾ ਅਹੁਦਾ ਸੰਭਾਲਣ ਤੋਂ ਬਾਅਦ ਮੈਂ ਰਸਮੀ ਮੁਲਾਕਾਤ ਅਤੇ ਪੰਜਾਬ ਦੇ ਮੁੱਦਿਆਂ 'ਤੇ ਚਰਚਾ ਕਰਨ ਲਈ ਮਾਣਯੋਗ ਪ੍ਰਧਾਨ ਮੰਤਰੀ ਅਤੇ ਗ੍ਰਹਿ ਮੰਤਰੀ ਤੋਂ ਸਮਾਂ ਮੰਗਿਆ ਹੈ।
— Bhagwant Mann (@BhagwantMann) March 22, 2022 " class="align-text-top noRightClick twitterSection" data="
">ਪੰਜਾਬ ਦੇ ਮੁੱਖ ਮੰਤਰੀ ਦਾ ਅਹੁਦਾ ਸੰਭਾਲਣ ਤੋਂ ਬਾਅਦ ਮੈਂ ਰਸਮੀ ਮੁਲਾਕਾਤ ਅਤੇ ਪੰਜਾਬ ਦੇ ਮੁੱਦਿਆਂ 'ਤੇ ਚਰਚਾ ਕਰਨ ਲਈ ਮਾਣਯੋਗ ਪ੍ਰਧਾਨ ਮੰਤਰੀ ਅਤੇ ਗ੍ਰਹਿ ਮੰਤਰੀ ਤੋਂ ਸਮਾਂ ਮੰਗਿਆ ਹੈ।
— Bhagwant Mann (@BhagwantMann) March 22, 2022ਪੰਜਾਬ ਦੇ ਮੁੱਖ ਮੰਤਰੀ ਦਾ ਅਹੁਦਾ ਸੰਭਾਲਣ ਤੋਂ ਬਾਅਦ ਮੈਂ ਰਸਮੀ ਮੁਲਾਕਾਤ ਅਤੇ ਪੰਜਾਬ ਦੇ ਮੁੱਦਿਆਂ 'ਤੇ ਚਰਚਾ ਕਰਨ ਲਈ ਮਾਣਯੋਗ ਪ੍ਰਧਾਨ ਮੰਤਰੀ ਅਤੇ ਗ੍ਰਹਿ ਮੰਤਰੀ ਤੋਂ ਸਮਾਂ ਮੰਗਿਆ ਹੈ।
— Bhagwant Mann (@BhagwantMann) March 22, 2022
ಇದನ್ನೂ ಓದಿ: ಮೋದಿ ಉಪಸ್ಥಿತಿಯಲ್ಲಿ ನಾಳೆ ಯೋಗಿ ಪ್ರಮಾಣ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರತಂಡಕ್ಕೂ ಆಹ್ವಾನ
ಕಳೆದ ಕೆಲ ವಾರಗಳ ಹಿಂದೆ ಬಹಿರಂಗಗೊಂಡಿರುವ ಪಂಜಾಬ್ ಚುನಾವಣಾ ಫಲಿತಾಂಶದಲ್ಲಿ ಆಮ್ ಆದ್ಮಿ ಪಕ್ಷ 117 ಕ್ಷೇತ್ರಗಳ ಪೈಕಿ 92ರಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಆಪ್, ದೆಹಲಿ ನಂತರ ಪಂಜಾಬ್ನಲ್ಲಿ ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿದೆ.