ಚಂಡೀಗಢ(ಪಂಜಾಬ್): ಪಂಜಾಬ್ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, 117 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ. 20ರಂದು ಮತದಾನ ನಡೆಯಲಿದೆ. ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಒಟ್ಟು 1304 ಸ್ಪರ್ಧಿಗಳು ಅಂತಿಮ ಕಣದಲ್ಲಿದ್ದಾರೆ.
ಭಾರತೀಯ ಜನತಾ ಪಾರ್ಟಿ, ಕಾಂಗ್ರೆಸ್, ಆಮ್ ಆದ್ಮಿ ಹಾಗೂ ಶಿರೋಮಣಿ ಅಕಾಲಿದಳಕ್ಕೆ ಪ್ರತಿಷ್ಠೆಯ ಕಣವಾಗಿರುವ ಪಂಜಾಬ್ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆದಿದ್ದು, ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿರಿ: ವಿಡಿಯೋ: BJP ಕಾರ್ಯಕರ್ತರಿಗೆ ಪ್ರಣಾಳಿಕೆ ನೀಡಲು ರೋಡ್ಶೋ ನಿಲ್ಲಿಸಿದ ಪ್ರಿಯಾಂಕಾ!
ಪಟಿಯಾಲಾ, ದೇಹತಿ ಮತ್ತು ಸಾಹ್ನೇವಾಲ್ನಲ್ಲಿ ಅತಿ ಹೆಚ್ಚು 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ದೀನಾನಗರ, ಚಂಡೀಗಢದಲ್ಲಿ ಕನಿಷ್ಠ ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣೆಗೋಸ್ಕರ ಒಟ್ಟು 2,266 ನಾಮಪತ್ರ ಸಲ್ಲಿಕೆಯಾಗಿದ್ದು, ಇದರಲ್ಲಿ 588 ಉಮೇದುವಾರಿಕೆ ರದ್ದುಗೊಳಿಸಿರುವುದಾಗಿ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಕರುಣಾ ರಾಜು ತಿಳಿಸಿದ್ದಾರೆ. 1645 ನಾಮಪತ್ರಗಳ ಪೈಕಿ 341 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದು, ಇದೀಗ ಕಣದಲ್ಲಿ 1304 ಅಭ್ಯರ್ಥಿಗಳಿದ್ದಾರೆಂದು ತಿಳಿಸಿದ್ದಾರೆ.
ಐದು ಸಲ ಪಂಜಾಬ್ ಮುಖ್ಯಮಂತ್ರಿ ಆಗಿದ್ದ ಪ್ರಕಾಶ್ ಸಿಂಗ್ ಬಾದ್ ಕಣದಲ್ಲಿದ್ದು, ಎಎಪಿ ಗುರ್ಮಿತ್ ಹಾಗೂ ಕಾಂಗ್ರೆಸ್ ಜಗ್ಪಾಲ್ ಸಿಂಗ್ ಕೂಡ ಸ್ಪರ್ಧೆ ಮಾಡಿದ್ದಾರೆ. ಸಾಹೀಬಾ ಕ್ಷೇತ್ರದಿಂದ ಹಾಲಿ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಈ ಕ್ಷೇತ್ರದಿಂದ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಮೃತಸರ್ ಪೂರ್ವದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಅಕಾಲಿ ದಳದಿಂದ ಬಿಕ್ರಮ್ ಮಜಿಥಿಯಾ ಸ್ಪರ್ಧೆ ಮಾಡಿದ್ದಾರೆ.