ಜಲಾಲಾಬಾದ್ (ಪಂಜಾಬ್): ಪಂಜಾಬ್‌ನ ಜಲಾಲಾಬಾದ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬೈಕ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.
ಬೈಕ್ ಸವಾರನಿಗೆ 22 ವರ್ಷ ವಯಸ್ಸಾಗಿದ್ದು, ಆತನ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಆತನ ಸಹೋದರ ಸಂಬಂಧಿ ಕೂಡ ಆತನೊಂದಿಗೆ ಬೇರೆ ಬೈಕ್ನಲ್ಲಿ ಪ್ರಯಾಣ ಬೆಳೆಸಿದ್ದನು. ಆದರೆ, ಅಪಘಾತದ ನಂತರ ಆತ ಬೈಕ್ ಬಿಟ್ಟು ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ವಿಧಿವಿಜ್ಞಾನ ತಂಡ ಘಟನೆ ಬಗ್ಗೆ ತನಿಖೆ ಕೈಗೊಂಡಿದೆ. ಅಪಘಾತದ ಹಿಂದಿನ ನಿಜವಾದ ಕಾರಣವನ್ನು ಬಹಿರಂಗಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.