ಚಂಡೀಗಢ(ಪಂಜಾಬ್): ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಭಗವಂತ್ ಮಾನ್ ಒಂದರ ಹಿಂದೊಂದರಂತೆ ಹೊಸ ಹೊಸ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಇದೀಗ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಉದ್ದೇಶದಿಂದ ಅಪರೂಪದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಮಾರ್ಚ್ 23ರಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ 'ಶಹೀದ್ ದಿವಸ್' ಅಂಗವಾಗಿ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸುವುದಾಗಿ ಭಗವಂತ್ ಮಾನ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ಅಥವಾ ಯಾರಾದರೂ ಲಂಚ ಕೇಳಿದರೆ ರಾಜ್ಯದ ಜನರು ಇನ್ಮುಂದೆ ತನ್ನದೇ ವಾಟ್ಸಾಪ್ ನಂಬರ್‌ಗೆ ವಿಡಿಯೋ ಅಥವಾ ಆಡಿಯೋ ರೆಕಾರ್ಡ್ ಮಾಡಿ ನೇರವಾಗಿ ಕಳುಹಿಸಬಹುದು ಎಂದು ತಿಳಿಸಿದ್ದಾರೆ.
ಪಂಜಾಬ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಭಗವಂತ್ ಮಾನ್ ಅವರು ಪಂಜಾಬ್ ಇತಿಹಾಸದಲ್ಲಿ ಯಾರೂ ತೆಗೆದುಕೊಳ್ಳದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿ, ಕುತೂಹಲ ಕೆರಳಿಸಿದ್ದರು. ಇದರ ಬೆನ್ನಲ್ಲೇ ಅವರು ಕೈಗೊಂಡಿರುವ ಈ ನಿರ್ಧಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ.
-
भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
— Bhagwant Mann (@BhagwantMann) March 17, 2022 " class="align-text-top noRightClick twitterSection" data="
पंजाब में अब भ्रष्टाचार नहीं चलेगा।
">भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
— Bhagwant Mann (@BhagwantMann) March 17, 2022
पंजाब में अब भ्रष्टाचार नहीं चलेगा।भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
— Bhagwant Mann (@BhagwantMann) March 17, 2022
पंजाब में अब भ्रष्टाचार नहीं चलेगा।
ಇದನ್ನೂ ಓದಿ: ಪಂಜಾಬ್ ಇತಿಹಾಸದಲ್ಲೇ ಯಾರೂ ತೆಗೆದುಕೊಳ್ಳದ ನಿರ್ಧಾರವನ್ನು ಶೀಘ್ರ ಘೋಷಿಸುತ್ತೇನೆ: ಪಂಜಾಬ್ ಸಿಎಂ
ರಾಜ್ಯದ ಮಾಜಿ ಸಚಿವರು, ಶಾಸಕರು ಸೇರಿದಂತೆ 57 ಮುಖಂಡರು ಸರ್ಕಾರಿ ಬಂಗಲೆ ಹಾಗೂ ಫ್ಲ್ಯಾಟ್ಗಳನ್ನು ಖಾಲಿ ಮಾಡುವಂತೆ ಈಗಾಗಲೇ ಸೂಚನೆ ನೀಡಿದ್ದಾರೆ. ಇದಕ್ಕೂ ಮುಂಚಿತವಾಗಿ ಪಂಜಾಬ್‌ನಲ್ಲಿ ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು ಸೇರಿದಂತೆ ವಿವಿಐಪಿಗಳಿಗೆ ನೀಡಿರುವ ಭದ್ರತೆಯನ್ನು ತಕ್ಷಣವೇ ಹಿಂಪಡೆದುಕೊಳ್ಳುವಂತೆ ಆದೇಶ ಹೊರಡಿಸಿದ್ದನ್ನು ಇಲ್ಲಿ ನೆನಪಿಸಬಹುದು.